ADVERTISEMENT

ಮಾರ್ಚ್‌ 2ಕ್ಕೆ ಚಾಮರಾಜನಗರ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಸರ್ವಾಧ್ಯಕ್ಷರಾಗಿ ಕೊತ್ತಲವಾಡಿ ಶಿವಕುಮಾರ್‌ ಆಯ್ಕೆ; ಡಾ.ರಾಜ್‌ಕುಮಾರ್‌ ರಂಗಮಂದಿರದಲ್ಲಿ ಅಕ್ಷರ ಜಾತ್ರೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2023, 1:56 IST
Last Updated 21 ಫೆಬ್ರುವರಿ 2023, 1:56 IST
ಚಾಮರಾಜನಗರ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಕೊತ್ತಲವಾಡಿ ಶಿವಕುಮಾರ್‌ ಅವರನ್ನು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಶೈಲಕುಮಾರ್‌, ತಾಲ್ಲೂಕು ಅಧ್ಯಕ್ಷ ಸುರೇಶ್‌ ಋಗ್ವೇದಿ ಹಾಗೂ ಇತರ ಪದಾಧಿಕಾರಿಗಳು ಸನ್ಮಾನಿಸಿ, ಸಮ್ಮೇಳನಕ್ಕೆ ಆಹ್ವಾನಿಸಿದರು
ಚಾಮರಾಜನಗರ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಕೊತ್ತಲವಾಡಿ ಶಿವಕುಮಾರ್‌ ಅವರನ್ನು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಶೈಲಕುಮಾರ್‌, ತಾಲ್ಲೂಕು ಅಧ್ಯಕ್ಷ ಸುರೇಶ್‌ ಋಗ್ವೇದಿ ಹಾಗೂ ಇತರ ಪದಾಧಿಕಾರಿಗಳು ಸನ್ಮಾನಿಸಿ, ಸಮ್ಮೇಳನಕ್ಕೆ ಆಹ್ವಾನಿಸಿದರು   

ಚಾಮರಾಜನಗರ: ಚಾಮರಾಜನಗರ ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಾರ್ಚ್‌ 2ರಂದು ನಗರದ ಡಾ.ರಾಜ್‌ಕುಮಾರ್‌ ಜಿಲ್ಲಾ ರಂಗ ಮಂದಿರದಲ್ಲಿ ನಡೆಯಲಿದೆ.

ಸಾಹಿತಿ, ಜೆಎಸ್‌ಎಸ್‌ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೊತ್ತಲವಾಡಿ ಶಿವಕುಮಾರ್‌ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊತ್ತಲವಾಡಿ ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ADVERTISEMENT

ಕಸಾಪ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಪದಾಧಿಕಾರಿಗಳು ಭಾನುವಾರ ಸಂಜೆ ಕೊತ್ತಲವಾಡಿ ಶಿವಕುಮಾರ್ ಅವರ ಮನೆಗೆ ತೆರಳಿ, ಅವರನ್ನು ಗೌರವಿಸಿ ಸಮ್ಮೇಳನಕ್ಕೆ ಆಹ್ವಾನ ನೀಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಶೈಲಕುಮಾರ್, ಕೋಶಾಧ್ಯಕ್ಷ ಆರ್.ವಿ.ಮಹದೇವಪ್ಪ, ನಿರ್ದೇಶಕರಾದ ರವಿಚಂದ್ರ ಪ್ರಸಾದ್, ಬಿ.ಕೆ.ಆರಾಧ್ಯ, ನಾಗರಾಜು ಮದ್ದೈಯನ ಹುಂಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.