ಮಹದೇಶ್ವರ ಬೆಟ್ಟ: ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಾದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವವು ಮಾ.27ರಿಂದ 30ರ ವರೆಗೆ ನಡೆಯಲಿದೆ.
ಮಹೋತ್ಸವದ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ, ನೆರೆಯ ತಮಿಳುನಾಡಿನಿಂದ ಕಾಲ್ನಡಿಗೆಯಲ್ಲಿ ಸಾವಿರಾರು ಭಕ್ತರು ಮಾದಪ್ಪನ ಸನ್ನಿಧಿಗೆ ಬರುತ್ತಿದ್ದಾರೆ. ಮಂಗಳವಾರ ಸಂಜೆ ಬಂದವರಿಗೆ ರಂಗಮಂದಿರದ ಆವರಣ ಹಾಗೂ ಅಕ್ಕಪಕ್ಕದಲ್ಲಿ ಉಳಿಯಲು ವ್ಯವಸ್ಥೆ ಕಲ್ಪಿಸಲಾಗಿದೆ.
ಗುರುವಾರ ಜಾತ್ರೆ ಪ್ರಾರಂಭವಾಗಲಿದ್ದು, ಶುಕ್ರವಾರ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ಜರುಗಲಿದೆ. ಶನಿವಾರ ಯುಗಾದಿ ಅಮಾವಾಸ್ಯೆಯ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದೆ. ಭಾನುವಾರ ಚಂದ್ರಮಾನ ಯುಗಾದಿ ಪ್ರಯುಕ್ತವಾಗಿ ಬೆಳಿಗ್ಗೆ 8ರಿಂದ 9 ಗಂಟೆಯವರೆಗೆ ನಡೆಯುವ ಶುಭ ಮುಹೂರ್ತದಲ್ಲಿ ಮಾದೇಶ್ವರ ಸ್ವಾಮಿಯ ಮಹಾ ರಥೋತ್ಸವ ನಡೆಯಲಿದೆ.
ವಿದ್ಯುತ್ ದೀಪಾಲಂಕಾರ: ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಸುತ್ತಲೂ ಹಾಗೂ ಕೊಳ್ಳೇಗಾಲಕ್ಕೆ ತೆರಳುವ ಚೆಕ್ ಪೋಸ್ಟ್‌ನಿಂದ ಪಾಲರ್‌ಗೆ ತೆರಳುವ ಚೆಕ್‌ಪೋಸ್ಟ್ ವರೆಗೆ, ಆಡಳಿತ ಕಚೇರಿ, ರಂಗಮಂದಿರದ ಆವರಣದ ಮುಂಭಾಗದ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಪ್ರಾಧಿಕಾರದ ವತಿಯಿಂದ ಕುಡಿಯುವ ನೀರು, ನೆರೆಳಿನ ವ್ಯವಸ್ಥೆ, ನಿರಂತರ ಅನ್ನ ದಾಸೋಹ ಸೇರಿ ಎಲ್ಲ ಬಗೆಯ ಸೌಕರ್ಯ ಕಲ್ಪಿಸಲಾಗಿದೆ.
ಗುರುವಾರ ಯುಗಾದಿ ಜಾತ್ರೆ ಪ್ರಾರಂಭ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ಶುಕ್ರವಾರ ಭಾನುವಾರ ನಡೆಯಲಿದೆ ಮಹಾರಥೋತ್ಸವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.