ADVERTISEMENT

ವೃತ್ತಿ ಒತ್ತಡ ತಗ್ಗಿಸಲು ಕ್ರೀಡೆ ಸಹಕಾರಿ: ಡಿವೈಎಸ್‌ಪಿ ಲಕ್ಷ್ಮಯ್ಯ

ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟಕ್ಕೆ ಡಿವೈಎಸ್‌ಪಿ ಲಕ್ಷ್ಮಯ್ಯ ಚಾಲನೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2025, 4:35 IST
Last Updated 14 ಜುಲೈ 2025, 4:35 IST
ಚಾಮರಾಜನಗದ ರಾಮಸಮುದ್ರದ ದೀನಬಂಧು ಶಾಲೆ ಆವರಣದಲ್ಲಿ ಭಾನುವಾರ ಪತ್ರಿಕಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ  ಕ್ರೀಡಾಕೂಟವನ್ನು ಗುಂಡು ಎಸೆಯುವ ಮೂಲಕ ಡಿವೈಎಸ್‌ಪಿ ಲಕ್ಷ್ಮಯ್ಯ ಉದ್ಘಾಟಿಸಿದರು
ಚಾಮರಾಜನಗದ ರಾಮಸಮುದ್ರದ ದೀನಬಂಧು ಶಾಲೆ ಆವರಣದಲ್ಲಿ ಭಾನುವಾರ ಪತ್ರಿಕಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ  ಕ್ರೀಡಾಕೂಟವನ್ನು ಗುಂಡು ಎಸೆಯುವ ಮೂಲಕ ಡಿವೈಎಸ್‌ಪಿ ಲಕ್ಷ್ಮಯ್ಯ ಉದ್ಘಾಟಿಸಿದರು   

ಚಾಮರಾಜನಗರ: ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರು ಕ್ರೀಡಾಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಒತ್ತಡ ನಿವಾರಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಡಿವೈಎಸ್‌ಪಿ ಲಕ್ಷ್ಮಯ್ಯ ಸಲಹೆ ನೀಡಿದರು.

ನಗರದ ರಾಮಸಮುದ್ರ ಬಡಾವಣೆಯಲ್ಲಿರುವ ದೀನಬಂಧು ಶಾಲೆ ಆವರಣದಲ್ಲಿ ಭಾನುವಾರ ಜಿಲ್ಲಾ ಕಾರ್ಯನಿರತ ಪತ್ರಿಕಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ  ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸರು ಹಾಗೂ ಪತ್ರಕರ್ತರು ಸಮಯದ ಮಿತಿ ಇಲ್ಲದೆ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಾರೆ. ವೃತ್ತಿಯ ಅತಿಯಾದ ಒತ್ತಡ ಅನಾರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದ್ದು ಎಚ್ಚರವಹಿಸಬೇಕು. ವೃತ್ತಿಯ ಜೊತೆಗೆ ಆರೋಗ್ಯವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು ಎಂದರು.

ಸಂಘದ ಅಧ್ಯಕ್ಷ ದೇವರಾಜು ಕಪ್ಪಸೋಗೆ ಮಾತನಾಡಿ, ಪತ್ರಕರ್ತರಲ್ಲಿ ಹೆಚ್ಚುತ್ತಿರುವ ವೃತ್ತಿ ಒತ್ತಡದಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಮಾನಸಿಕ ಒತ್ತಡ ನಿವಾರಿಸಿಕೊಳ್ಳಬೇಕು ಎಂದರು.

ADVERTISEMENT

ಜಿಲ್ಲೆಯಲ್ಲಿ ಕ್ರೀಡಾ ಕ್ಷೇತ್ರ ಅಭಿವೃದ್ಧಿ ಹೊಂದಿಲ್ಲ, ಜಿಲ್ಲಾ ಕ್ರೀಡಾಂಗಣ ಕಾಮಗಾರಿ ದಶಕಗಳು ಕಳೆದರೂ ಪೂರ್ಣವಾಗಿಲ್ಲ. ಜಿಲ್ಲೆಯ ಕ್ರೀಡಾಪಟುಗಳು ಸೌಲಭ್ಯ ವಂಚಿತರಾಗಿದ್ದು ರಾಜ್ಯ ಹಾಗೂ ರಾಷ್ಟ್ರಮಟ್ಟದ ವೇದಿಕೆ ಪ್ರವೇಶಿಸಲಾಗುತ್ತಿಲ್ಲ. ಸರ್ಕಾರ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದರು.‌

ಇದೇವೇಳೆ ‘ಮೈಸೂರು ಮಿತ್ರ ಪತ್ರಿಕೆ ಸಂಪಾದಕರಾದ ಕೆ.ಬಿ.ಗಣಪತಿ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಪರಿಷತ್ ಸದಸ್ಯ ಗೂಳೀಪುರ ನಂದೀಶ್, ಪ್ರಧಾನ ಕಾರ್ಯದರ್ಶಿ ಎಸ್.ಪ್ರಸಾದ್ ಲಕ್ಕೂರ್,  ಕ್ರೀಡಾಪಟು ವಿ.ಶ್ರೀನಿವಾಸ ಪ್ರಸಾದ್, ಮಹದೇವ್ ಹೆಗ್ಗವಾಡಿಪುರ, ಸಂಘದ ಪದಾಧಿಕಾರಿಗಳು, ಸದಸ್ಯರು, ಕುಟುಂಬದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.