ಚಾಮರಾಜನಗರ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರ ಪುತ್ರ ಚಾಮರಾಜ್(42) ಸೋಮವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ ಒಂದೂವರೆ ತಿಂಗಳಿನಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಮರಾಜ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಸಿ.ಪುಟ್ಟರಂಗಶೆಟ್ಟಿ ಹಾಗೂ ವೆಂಕಟಮ್ಮ ದಂಪತಿಯ ಹಿರಿಯ ಪುತ್ರನಾಗಿರುವ ಚಾಮರಾಜ್‌ಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಸಂಜೆ 6ಗಂಟೆಗೆ ಯಳಂದೂರು ತಾಲೂಕಿನ ಸ್ವಗ್ರಾಮವಾದ ಉಪ್ಪಿನಮೋಳೆಯಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
13ರಂದು ಸಂಜೆ ಉಪ್ಪಿನಮೋಳೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.