ADVERTISEMENT

ಚಾಮರಾಜನಗರ: ಬನಾನಾ ರೈಡ್‌, ಕಯಾಕಿಂಗ್ ಮೋಡಿ...

ಸುವರ್ಣಾವತಿ ಜಲಾಶಯದಲ್ಲಿ ಜಲ ಸಾಹಸ ಕ್ರೀಡೋತ್ಸವಕ್ಕೆ ತೆರೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 2:04 IST
Last Updated 7 ಫೆಬ್ರುವರಿ 2026, 2:04 IST
<div class="paragraphs"><p>ಚಾಮರಾಜನಗರ ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಹಮ್ಮಿಕೊಂಡಿದ್ದ 'ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವ'ದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಶ್ರೀರೂಪಾ ಜೆಟ್‌ ಸ್ಕೀ ಚಲಾಯಿಸಿದರು</p></div>

ಚಾಮರಾಜನಗರ ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಹಮ್ಮಿಕೊಂಡಿದ್ದ 'ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವ'ದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಶ್ರೀರೂಪಾ ಜೆಟ್‌ ಸ್ಕೀ ಚಲಾಯಿಸಿದರು

   

ಚಾಮರಾಜನಗರ: ಪ್ರವಾಸೋದ್ಯಮ ಕ್ಷೇತ್ರವನ್ನು ಉತ್ತೇಜಿಸಲು ಹಾಗೂ ಜಲ ಸಾಹಸ ಕ್ರೀಡೆಗಳತ್ತ ಜನರನ್ನು ಆಕರ್ಷಿಸಲು ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ 'ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವ'ಕ್ಕೆ ಶುಕ್ರವಾರ ತೆರೆಬಿತ್ತು.

ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಸಹಯೋಗದಲ್ಲಿ ಏರ್ಪಡಿಸಿದ್ದ ಜಲ ಸಾಹಸ ಕ್ರೀಡೋತ್ಸವದ ಕೊನೆಯ ದಿನ ಸಾರ್ವಜನಿಕರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಜಲ ಸಾಹಸ ಕ್ರೀಡೆಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು. 

ADVERTISEMENT

ಜಿಲ್ಲಾಧಿಕಾರಿ ಶ್ರೀರೂಪ, ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಜೆಟ್ ಸ್ಕೀ ಹಾಗೂ ಸ್ಪೀಡ್ ಬೋಟ್‌ನಲ್ಲಿ ಸಂಚರಿಸಿದರು. ಸಾರ್ವಜನಿಕರು, ಪೊಲೀಸ್, ಆರೋಗ್ಯ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಗರಸಭೆ ಸೇರಿದಂತೆ ಹಲವ ಇಲಾಖೆಗಳ ನೌಕರರು ಭಾಗವಹಿಸಿದ್ದರು. ಲೈಫ್ ಜಾಕೆಟ್ ಧರಿಸಿ ಜೆಟ್ ಸ್ಕೀ, ಬನಾನಾ ರೈಡ್‌, ಕಯಾಕಿಂಗ್, ರಾಫ್ಟಿಂಗ್‌ ಹಾಗೂ ಸ್ಪೀಡ್ ಬೋಟ್‌ಗಳಲ್ಲಿ ಸಾಗಿ ಹೊಸ ಅನುಭವ ಪಡೆದುಕೊಂಡರು.

ಜಲ ಸಾಹಸ ಕ್ರೀಡೋತ್ಸವಕ್ಕೆ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಸರ್ಕಾರಿ ಇಲಾಖೆಗಳ ನೌಕರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.