ಬಾಲ್ಯ ವಿವಾಹ
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ನಾಲ್ವರು ಹಾಗೂ ಹನೂರು ತಾಲ್ಲೂಕಿನ ಒಬ್ಬ ಬಾಲಕಿಯ ಮದುವೆ ಸಿದ್ಧತೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ತಡೆದು ಪೋಷಕರಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಸಹಾಯವಾಣಿಗೆ ಬಂದ ದೂರು ಆಧರಿಸಿ ಪರಿಶೀಲಿಸಲಾಯಿತು. ಬಾಲಕಿಯರಿಗೆ 18 ವರ್ಷ ಆಗುವವರೆಗೂ ಮದುವೆ ಮಾಡುವುದಿಲ್ಲ ಎಂದು ಪೋಷಕರಿಂದ ಮುಚ್ಚಳಿಕೆ ಬರೆಸಿ ಕೊಳ್ಳಲಾಗಿದೆ’ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಮಾಹಿತಿ ನೀಡಿದರು.
ಹನೂರು ತಾಲ್ಲೂಕಿನ ಗ್ರಾಮದಲ್ಲಿ ನಡೆಯಬೇಕಿದ್ದ ಬಾಲ್ಯವಿವಾಹವನ್ನೂ ತಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.