ADVERTISEMENT

ಮಕ್ಕಳೇ ದೇಶದ ಭವಿಷ್ಯ: ಶಿಕ್ಷಕ ಮಹದೇಶ್ವರಸ್ವಾಮಿ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2025, 4:45 IST
Last Updated 28 ಡಿಸೆಂಬರ್ 2025, 4:45 IST
ಗುಂಡ್ಲುಪೇಟೆ ತಾಲ್ಲೂಕಿನ ಪರಿಸರ ಮಿತ್ರ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವೀರ ಬಾಲ ದಿವಸ ಕಾರ್ಯಕ್ರಮದಲ್ಲಿ ಶಿಕ್ಷಕರು, ಮಕ್ಕಳು ಭಾಗವಹಿಸಿದ್ದರು
ಗುಂಡ್ಲುಪೇಟೆ ತಾಲ್ಲೂಕಿನ ಪರಿಸರ ಮಿತ್ರ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವೀರ ಬಾಲ ದಿವಸ ಕಾರ್ಯಕ್ರಮದಲ್ಲಿ ಶಿಕ್ಷಕರು, ಮಕ್ಕಳು ಭಾಗವಹಿಸಿದ್ದರು   

ಗುಂಡ್ಲುಪೇಟೆ: ಭವ್ಯ ಭಾರತ ನಿರ್ಮಾಣ ಕಾರ್ಯದಲ್ಲಿ ಮಕ್ಕಳ ಪಾತ್ರ ಬಹಳ ದೊಡ್ಡದು ಎಂದು ಮುಖ್ಯ ಶಿಕ್ಷಕ ಮಹದೇಶ್ವರಸ್ವಾಮಿ ತಿಳಿಸಿದರು.

ತಾಲ್ಲೂಕಿನ ಪರಿಸರ ಮಿತ್ರ ಹೊಂಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಜ್ಯೋತಿ ಬೆಳಗಿಸುವ ಮೂಲಕ ವೀರ ಬಾಲ ದಿವಸ ಉದ್ಘಾಟಿಸಿ ಮಾತನಾಡಿದರು. ದೇಶದ ಭವಿಷ್ಯ ಮಕ್ಕಳ ಮೇಲೆ ಅದರಲ್ಲೂ ವಿಶೇಷವಾಗಿ ಯುವ ಪೀಳಿಗೆ ಮೇಲೆ ಅವಲಂಬಿಸಿದೆ. ಪ್ರತಿಯೊಬ್ಬರೂ ಉತ್ತಮ ಗುಣಮಟ್ಟದ ಶಿಕ್ಷಣ ಜೊತೆಗೆ ಸಂಸ್ಕಾರ ಪಡೆದು ಭಾರತೀಯ ಸಂಸ್ಕೃತಿಯನ್ನು ಉಳಿಸಬೇಕು ಎಂದರು.

ದೇಶ ಭಕ್ತಿ, ಪ್ರೇಮ, ಸೇವೆ ಮಾಡುವುದನ್ನು ಮಕ್ಕಳು ಚಿಕ್ಕ ವಯಸ್ಸಿನಿಂದಲೇ ಬೆಳೆಸಿಕೊಳ್ಳಬೇಕು. ಸ್ವತಂತ್ರ ಭಾರತವನ್ನು ಸ್ವಾವಲಂಬನೆ, ಸ್ವಾಭಿಮಾನ, ಸ್ವಚ್ಛ ಭಾರತ, ಸ್ವಸ್ಥ ಭಾರತ, ವಿಕಸಿತ ಭಾರತವನ್ನು ನಿರ್ಮಾಣ ಮಾಡುವ ಪುರುಷ ಸಿಂಹಗಳಾಗಬೇಕು ಎಂದು ಸಲಹೆ ನೀಡಿದರು.

ADVERTISEMENT

ವೀರ ಬಾಲ ದಿವಸ ಕಾರ್ಯಕ್ರಮದ ಪ್ರಯುಕ್ತ ಮಕ್ಕಳಿಗೆ ಚಿತ್ರಕಲೆ, ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತ ಮಕ್ಕಳಿಗೆ ಬಹುಮಾನವಾಗಿ ಪುಸ್ತಕ ನೀಡಲಾಯಿತು. ಶಿಕ್ಷಕರಾದ ವಿನೋದ, ಕವಿತ ಸೇರಿದಂತೆ ಶಾಲಾ ಮಕ್ಕಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.