ADVERTISEMENT

ಕೊಳ್ಳೇಗಾಲ: ಉಜ್ಜೀವನ್ ಬ್ಯಾಂಕ್ ಸಿಬ್ಬಂದಿಯಿಂದ ಸ್ವಚ್ಛತಾ ಕಾರ್ಯ

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 15:16 IST
Last Updated 4 ಜೂನ್ 2025, 15:16 IST
ಕೊಳ್ಳೇಗಾಲದ ಎಂ.ಜಿ.ಎಸ್‌.ವಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಸಿಬ್ಬಂದಿಯು ಬುಧವಾರ ಸ್ವಚ್ಛತಾ ಕಾರ್ಯ ನಡೆಸಿ ಕಸ ಸಂಗ್ರಹಿಸಿದರು  
ಕೊಳ್ಳೇಗಾಲದ ಎಂ.ಜಿ.ಎಸ್‌.ವಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಸಿಬ್ಬಂದಿಯು ಬುಧವಾರ ಸ್ವಚ್ಛತಾ ಕಾರ್ಯ ನಡೆಸಿ ಕಸ ಸಂಗ್ರಹಿಸಿದರು     

ಕೊಳ್ಳೇಗಾಲ: ಇಲ್ಲಿನ ಎಂ.ಜಿ.ಎಸ್‌.ವಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಸಿಬ್ಬಂದಿ ಬುಧವಾರ ಸ್ವಚ್ಛತಾ ಕಾರ್ಯ ನಡೆಸಿದರು.

ಬೆಳಿಗ್ಗೆ 6ಕ್ಕೆ ಆಗಮಿಸಿದ 20ಕ್ಕೂ ಹೆಚ್ಚು ಸಿಬ್ಬಂದಿ ಕಾಲೇಜು ಮೈದಾನ ಹಾಗೂ ವಾಕಿಂಗ್ ಪಾತ್‌ ಸ್ವಚ್ಛ ಮಾಡುವುದರ ಜತೆಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಬ್ಯಾಂಕ್ ಮ್ಯಾನೇಜರ್ ಗೌತಮ್ ಮಾತನಾಡಿ, ‘ನಗರದ ಸೌಂದರ್ಯವನ್ನು ಕಾಪಾಡುವುದರ ಜೊತೆಗೆ ಎಲ್ಲರ ಆರೋಗ್ಯ ಉತ್ತಮವಾಗಿರಬೇಕು ಎನ್ನುವ ಉದ್ದೇಶದಿಂದ ಕಸ, ಕಳೆಗಿಡ ಸೇರಿದಂತೆ ಅನೇಕ ತ್ಯಾಜ್ಯಗಳನ್ನು ತೆರವು ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇದೇ ರೀತಿ ಸಾರ್ವಜನಿಕ ಸ್ಥಳಗಳನ್ನು ಸಹ ಸ್ವಚ್ಛತಾ ಕಾರ್ಯವನ್ನು ಮಾಡಬೇಕು ಎಂಬ ನಿರೀಕ್ಷೆಯಿದೆ. ಪ್ರತಿಯೊಬ್ಬರೂ ನಿಮ್ಮ ಮನೆ ಸುತ್ತಮುತ್ತ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸಗಳನ್ನು ಹಾಕಬಾರದು’ ಎಂದು ಮನವಿ ಮಾಡಿದರು.

ಸಿಬ್ಬಂದಿ ಮೋಹನ್, ಪ್ರದೀಪ್, ಸುನಿಲ್, ಶೆಬುವೇಲ್ ಸ್ಟೀವನ್, ಮಹೇಶ್, ರಂಜಿತ್, ಶೃತಿ, ರಘು, ಚೌಡನಾಯಕ, ಕುಮಾರ್ ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT