ADVERTISEMENT

ಚಾಮರಾಜನಗರ: ಕೆಎಸ್‌ಆರ್‌ಟಿಸಿಯ ಏಳು ಚಾಲಕರಿಗೆ ಚಿನ್ನದ ಪದಕ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 11:06 IST
Last Updated 26 ಜನವರಿ 2022, 11:06 IST
ಅಪಘಾತರಹಿತ ಚಾಲನೆ ಮಾಡಿದ್ದಕ್ಕಾಗಿ ಕೆಎಸ್‌ಆರ್‌ಟಿಸಿಯ ಏಳು ಮಂದಿ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಪ್ರದಾನ ಮಾಡಲಾಯಿತು
ಅಪಘಾತರಹಿತ ಚಾಲನೆ ಮಾಡಿದ್ದಕ್ಕಾಗಿ ಕೆಎಸ್‌ಆರ್‌ಟಿಸಿಯ ಏಳು ಮಂದಿ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಪ್ರದಾನ ಮಾಡಲಾಯಿತು   

ಚಾಮರಾಜನಗರ:ಅಪಘಾತ ರಹಿತವಾಗಿ ಬಸ್‌ ಚಾಲನೆ ಮಾಡಿದ ಕೆಎಸ್‌ಆರ್‌ಟಿಸಿಯ ಚಾಮರಾಜನಗರ ವಿಭಾಗದ ಏಳು ಮಂದಿ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕಗಳನ್ನು ಬುಧವಾರ ಪ್ರದಾನ ಮಾಡಲಾಯಿತು.

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು, ಏಳು ಮಂದಿಗೂ ಮುಖ್ಯಮಂತ್ರಿ ಪದಕ ಹಾಗೂ ಪ್ರಮಾಣ ಪತ್ರ ವಿತರಿಸಿ ಸನ್ಮಾನಿಸಿದರು.

ಚಾಮರಾಜನಗರ ಘಟಕದ ಬಸವರಾಜು, ಗುಂಡ್ಲುಪೇಟೆ ಘಟಕದ ನಂಜುಂಡಸ್ವಾಮಿ ಆರ್‌., ಸಿದ್ದರಾಜು ಆರ್‌, ಚಂದ್ರಶೇಖರ ಡಿ.ಜೆ., ಮಹದೇವನಾಯ್ಕ ಹಾಗೂ ಕೊಳ್ಳೇಗಾಲ ಘಟಕದ ವಿ.ಗೋವಿಂದಯ್ಯ, ಎಸ್‌.ರಾಚಯ್ಯ ಅವರು 2017 ಹಾಗೂ 2018ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದರು.

ADVERTISEMENT

ಶಾಸಕ ಸಿ.ಪುಟ್ಟರಂಗಶೆಟ್ಟಿ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ, ನಗರಸಭೆ ಅಧ್ಯಕ್ಷೆ ಸಿ.ಎಂ ಆಶಾ, ಉಪಾಧ್ಯಕ್ಷೆ ಪಿ.ಸುಧಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ.ಬಿ.ಶಾಂತಮೂತಿ೯, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಪಂ ಸಿಇಒ ಕೆ.ಎಂ ಗಾಯತ್ರಿ, ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಜಿ.ಸಂತೋಷ್‌ಕುಮಾರ್‌, ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಸುಂದರ್ ರಾಜ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ ಬಿ ಹಾಗೂ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.