ADVERTISEMENT

‘ಡಾ.ಜಿ.ಪರಮೇಶ್ವರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಿ’

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2025, 6:05 IST
Last Updated 26 ಡಿಸೆಂಬರ್ 2025, 6:05 IST

ಚಾಮರಾಜನಗರ: ಕಾಂಗ್ರೆಸ್ ಪಕ್ಷಕ್ಕೆ ದಲಿತ ಸಮುದಾಯಗಳ ಮೇಲೆ ಕಾಳಜಿ ಇದ್ದರೆ ದಲಿತ ನಾಯಕ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ದಲಿತ ಮುಖ್ಯಮಂತ್ರಿ ಹೋರಾಟ ಸಮಿತಿ ಅಧ್ಯಕ್ಷ ದಲಿತರಾಜ್ ಒತ್ತಾಯಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಲಿತರ ಮತ ಪಡೆದು ಅಧಿಕಾರ ಹಿಡಿದಿರುವ ಕಾಂಗ್ರೆಸ್ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಮೀನಮೇಷ ಎಣಿಸುತ್ತಿದೆ. ಹಿಂದೆ ಸಮುದಾಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಲಾಯಿತು. ಜಿ.ಪರಮೇಶ್ವರ್ ಅವರಿಗೂ ಮುಖ್ಯಮಂತ್ರಿ ಸ್ಥಾನ ಕೊಡಲಿಲ್ಲ.

ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನೆಡೆಸಿ ಅಧಿಕಾರ ಚುಕ್ಕಾಣಿ ಹಿಡಿಯಲು ಶ್ರಮಿಸಿರುವ ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಈ ಮೂಲಕ ಕಾಂಗ್ರೆಸ್‌ ದಲಿತ ಸಮುದಾಯಗಳ ಋಣ ತೀರಿಸಬೇಕು. ಕಾಂಗ್ರೆಸ್ ಹೈಕಮಾಂಡ್ ಬೇಡಿಕೆ ಈಡೇರಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ADVERTISEMENT

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಬಂಗಾರಸ್ವಾಮಿ, ಗೂಳಿಪುರ ಅರ್ಜುನ್, ಕೃಷ್ಣರಾಜು, ಮಹೇಶ್ ಗಾಳೀಪುರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.