ಅಪಘಾತ
–ಪ್ರಾತಿನಿಧಿಕ ಚಿತ್ರ
ಗುಂಡ್ಲುಪೇಟೆ: ಕೇರಳ ಸಾರಿಗೆ ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಗುಂಡ್ಲುಪೇಟೆ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬೆಂಡಗಳ್ಳಿ-ಮಳವಳ್ಳಿ ಮಾರ್ಗ ಮಧ್ಯೆ ಗುರುವಾರ ಸಂಭವಿಸಿದೆ.
ಗಾಯಗೊಂಡವರನ್ನು ಓಮಿನಿಯಲ್ಲಿದ್ದವರು ಎಂದು ಗುರುತಿಸಲಾಗಿದೆ. ಗುಂಡ್ಲುಪೇಟೆಯಿಂದ ತೆರಳುತ್ತಿದ್ದ ಕೇರಳ ಸಾರಿಗೆ ಬಸ್‍ಗೆ ಮೈಸೂರಿನಿಂದ ಬರುತ್ತಿದ್ದ ಓಮಿನಿ ಕಾರು ಓವರ್ ಟೇಕ್ ಮಾಡುವಾಗ ಈ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.