ADVERTISEMENT

ಗುಂಡ್ಲುಪೇಟೆ | ಕಾರು-ಟೆಂಪೊ ನಡುವೆ ಮುಖಾಮುಖಿ ಡಿಕ್ಕಿ; ಚಾಲಕ ಸಜೀವ ದಹನ

​ಪ್ರಜಾವಾಣಿ ವಾರ್ತೆ
Published 2 ಜುಲೈ 2023, 2:56 IST
Last Updated 2 ಜುಲೈ 2023, 2:56 IST
   

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿ ಗೇಟ್ ಬಳಿ ಶನಿವಾರ ರಾತ್ರಿ ಟೆಂ‍ಪೊ ಮತ್ತು ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ, ಕಾರಿಗೆ ಬೆಂಕಿ ಹತ್ತಿಕೊಂಡು ಚಾಲಕ ಸಜೀವ ದಹನವಾಗಿದ್ದಾರೆ.

ಮೃತಪಟ್ಟ ಚಾಲಕನನ್ನು ಮೈಸೂರಿನ ಮುಜಾಮಿಲ್ ಅಹಮದ್ ಎಂದು ಗುರುತಿಸಲಾಗಿದೆ.

ಶನಿವಾರ ರಾತ್ರಿ 10.45ರ ಸುಮಾರಿಗೆ ಈ ಘಟನೆ ನಡೆದಿದೆ. ಟೆಂಪೊ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ADVERTISEMENT

ಕಾರು ಸಂಪೂರ್ಣ ಸುಟ್ಟು ಹೋಗಿದ್ದು, ಟೆಂಪೋ ಮುಂಭಾಗ ಸುಟ್ಟು ಹೋಗಿದೆ.

ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ರಾತ್ರಿಯೇ ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು. ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.