ADVERTISEMENT

ಏಕಾಗ್ರತೆ ಉತ್ತಮ ಅಂಕ ಗಳಿಕೆಗೆ ಸಹಕಾರಿ: ದಡದಹಳ್ಳಿ ರಮೇಶ್

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 6:07 IST
Last Updated 12 ಜನವರಿ 2026, 6:07 IST
ಚಾಮರಾಜನಗರ ತಾಲ್ಲೂಕಿನ ಚಂದಕವಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ, ಸಾಂಸ್ಕೃತಿಕ ಕ್ರೀಡೆ, ರೋವರ್ಸ್ ಮತ್ತು ರೇಂಜರ್ಸ್ ರೆಡ್ ಕ್ರಾಸ್ ಘಟಕಗಳ ಕಾರ್ಯಕ್ರಮ ಮತ್ತು ವಾರ್ಷಿಕೋತ್ಸವ ಸಮಾರೋಪ ಸಮಾರಂಭದಲ್ಲಿ ದಡದಹಳ್ಳಿ ರಮೇಶ್ ಕಾಲೇಜಿಗೆ ಧನ ಸಹಾಯ ಮಾಡಿದರು
ಚಾಮರಾಜನಗರ ತಾಲ್ಲೂಕಿನ ಚಂದಕವಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ, ಸಾಂಸ್ಕೃತಿಕ ಕ್ರೀಡೆ, ರೋವರ್ಸ್ ಮತ್ತು ರೇಂಜರ್ಸ್ ರೆಡ್ ಕ್ರಾಸ್ ಘಟಕಗಳ ಕಾರ್ಯಕ್ರಮ ಮತ್ತು ವಾರ್ಷಿಕೋತ್ಸವ ಸಮಾರೋಪ ಸಮಾರಂಭದಲ್ಲಿ ದಡದಹಳ್ಳಿ ರಮೇಶ್ ಕಾಲೇಜಿಗೆ ಧನ ಸಹಾಯ ಮಾಡಿದರು   

ಚಾಮರಾಜನಗರ: ವಿದ್ಯಾರ್ಥಿಗಳು ಓದಿನಲ್ಲಿ ಏಕಾಗ್ರತೆ ರೂಢಿಸಿಕೊಂಡರೆ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಲು ಸಹಕಾರಿಯಾಗುತ್ತದೆ ಎಂದು ದಡದಹಳ್ಳಿ ರಮೇಶ್ ಸಲಹೆ ನೀಡಿದರು.

ತಾಲ್ಲೂಕಿನ ಚಂದಕವಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ, ಸಾಂಸ್ಕೃತಿಕ ಕ್ರೀಡೆ, ರೋವರ್ಸ್ ಮತ್ತು ರೇಂಜರ್ಸ್ ರೆಡ್ ಕ್ರಾಸ್ ಘಟಕಗಳು ಮತ್ತು ಶಾಲಾ ವಾರ್ಷಿಕೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಪರೀಕ್ಷೆಯಲ್ಲಿ ಎದುರಾಗಬಹುದಾದ ಗೊಂದಲಗಳನ್ನು ಉಪನ್ಯಾಸಕರು ಹಾಗೂ ಪ್ರಾಂಶುಪಾಲರೊಂದಿಗೆ ಚರ್ಚಿಸಿ ಮಾರ್ಗದರ್ಶನ ಪಡೆದು ಬಗೆಹರಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎಚ್.ಎನ್.ಸ್ವಾಮಿ ಮಾತನಾಡಿ ‘ಅಂಬೇಡ್ಕರ್ ಸಂವಿಧಾನದ ಫಲವಾಗಿ ಕಡ್ಡಾಯ ಶಿಕ್ಷಣದ ಹಕ್ಕು ಲಭಿಸಿದ್ದು ಪ್ರತಿ ಮಗುವಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ದೊರೆಯುತ್ತಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ADVERTISEMENT

ಉಪ ಪ್ರಾಂಶುಪಾಲ ಟಿ.ಚಂದ್ರಶೇಖರ್ ಮಾತನಾಡಿ ‘ವಿದ್ಯಾರ್ಥಿಗಳು ಯಾವುದೇ ವಿಭಾಗವನ್ನು ಆಯ್ಕೆ ಮಾಡಿಕೊಂಡರೂ ನಿರ್ಲಕ್ಷ್ಯ ಹಾಗೂ ತಾತ್ಸಾರ ತೋರದೆ ಚೆನ್ನಾಗಿ ಓದಬೇಕು ಎಂದರು.

ಉಪನ್ಯಾಸಕರಾದ ಪಿ.ನಟರಾಜ್, ಶಿವಸ್ವಾಮಿ, ಕೇಶವ್, ರವಿ.ಎಂ. ಶಾಜೀಯಾ ಹಸನ್, ಚೈತ್ರಾ ಎಂ, ಹೇಮಾ, ರುಚಿತಾ, ಮಂಜುಶ್ರೀ, ಗಾಯಿತ್ರಿ ಕಾರ್ಯಕ್ರಮದಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.