ADVERTISEMENT

ಚಾಮರಾಜನಗರ | ಇಂದಿರಾ ಕೆಲಸ ಜನಮಾನಸದಲ್ಲಿದೆ: ಪುಟ್ಟರಂಗಶೆಟ್ಟಿ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2023, 14:12 IST
Last Updated 19 ನವೆಂಬರ್ 2023, 14:12 IST
ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ಭಾನುವಾರ ನಡೆದ ಇಂದಿರಾ ಗಾಂಧಿಯವರ 106ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಇತರರು ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು
ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ಭಾನುವಾರ ನಡೆದ ಇಂದಿರಾ ಗಾಂಧಿಯವರ 106ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಇತರರು ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು   

ಚಾಮರಾಜನಗರ: ನೇರ, ದಿಟ್ಟ, ಉಕ್ಕಿನ ಮಹಿಳೆ ಎಂದೇ ಖ್ಯಾತಿ ಪಡೆದಿದ್ದ ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ರೂಪಿಸಿದ್ದ ಜನಪರ ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿ ಉಳಿದಿವೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಭಾನುವಾರ ಹೇಳಿದರು. 

ನಗರದ ಜಿಲ್ಲಾ ಕಾಂಗ್ರಸ್ ಸಮಿತಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 106ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುರ್ಪ್ಪಾಚನೆ ಸಲ್ಲಿಸಿ ಮಾತನಾಡಿದರು. 

‘ದೇಶದ ಅಭಿವೃದ್ಧಿಗೆ ಪೂರಕವಾಗಿದ್ದ ಕಾರ್ಯಕ್ರಮಗಳನ್ನು ಇಂದಿರಾ ಗಾಂಧಿ ನೀಡಿದ್ದರು.  ದೀನ ದಲಿತರು, ಹಿಂದುಳಿದ ವರ್ಗಗಳ ಮತ್ತು ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೂಂಡು 20 ಅಂಶಗಳ ಕಾರ್ಯಕ್ರಮ ಜಾರಿಗೊಳಿಸಿದ್ದರು’ ಎಂದರು. 

ADVERTISEMENT

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ‘ದೇಶದ ಬಡತನ ನಿರ್ಮೂಲನೆಗೆ ಹಾಗೂ ಆರ್ಥಿಕ ಅಭಿವೃದ್ದಿಗೆ ಇಂದಿರಾ ಗಾಂಧಿ ಅವರ ಶ್ರಮ ಬಹಳಷ್ಟಿದೆ. ಅವರು ದೇಶದ ಕಂಡ ಸಮರ್ಥ ಪ್ರಧಾನಿಗಳಲ್ಲಿ ಒಬ್ಬರು. ದೇಶವನ್ನು ಮುನ್ನಡೆಸುವುದರ ಜೊತೆಗೆ ನೆರೆ ದೇಶಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು’ ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ, ಕಾರ್ಯದರ್ಶಿ ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್‌ ಮುನ್ನಾ, ಮುಖಂಡ ಸೋಮನಾಯಕ್, ನಗರಸಭಾ ಸದಸ್ಯೆ ಚಿನ್ನಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷ ರೋಪೇಶ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಸೋಮಣ್ಣ, ಗ್ರಾಮಾಂತರ ಮಹಿಳಾ ವಿಭಾಗದ ಅಧ್ಯಕ್ಷೆ ಶಕುಂತಲಾ, ನಾಗರತ್ನ, ಪದ್ಮಾ ಪುರುಷೋತ್ತಮ್, ಭಾಗ್ಯಮ್ಮ, ನಸ್ರುಲ್ಲಾಖಾನ್, ಅಬ್ಬಾಸ್, ನಯಾಜ್‌ಪಾಷ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.