ಚಾಮರಾಜನಗರ: ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ವಿರುದ್ದ ಅಪಪ್ರಚಾರ ನಡೆಸಿರುವವರ ವಿರುದ್ದ ಕಾಂಗ್ರೆಸ್ ಜಿಲ್ಲಾ ಚುನಾವಣಾ ಅಧಿಕಾರಿ ಮತ್ತು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರಿಗೆ ದೂರು ನೀಡಿದೆ.
ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮೈಸೂರು ಗ್ರಾಮಾಂತರ ಹಾಗೂ ಚಾಮರಾಜನಗರದ ಪದಾಧಿಕಾರಿಗಳಾದ ಹೇಮಂತ್ ಕುಮಾರ್ ಹಾಗೂ ಸೈಯದ್ ಅವರು ನಗರದ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದರು.
‘ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ಮಹದೇವಸ್ವಾಮಿ ಎನ್ ಹೊಂಗನೂರು, ಮಂಜು ಶಿವಪುರ, ಮೂರ್ತಿ ಮುತ್ತಿಗೆ, ಯೋಗೇಶ್ ಸಾಂಗ್ಲಿಯಾನ ಹಾಗೂ ಚರಣ್ ಎಂಬುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.