ADVERTISEMENT

ಗುಂಡ್ಲುಪೇಟೆ | ಮುಂದಿನ ಚುನಾವಣೆಗೆ ಸಜ್ಜಾಗಿ: ಶಾಸಕ ಗಣೇಶ್

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2025, 2:27 IST
Last Updated 17 ಅಕ್ಟೋಬರ್ 2025, 2:27 IST
ಗುಂಡ್ಲುಪೇಟೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುಂಡ್ಲುಪೇಟೆ ಬ್ಲಾಕ್ ಹಾಗೂ ಬೇಗೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗ ವತಿಯಿಂದ ಹಮ್ಮಿಕೊಂಡಿದ್ದ ‘ವಾಯ್ಸ್ ಆಫ್ ಓಬಿಸಿ ಕಾರ್ಯಕ್ರಮ’ವನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ಉದ್ಘಾಟಿಸಿದರು
ಗುಂಡ್ಲುಪೇಟೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುಂಡ್ಲುಪೇಟೆ ಬ್ಲಾಕ್ ಹಾಗೂ ಬೇಗೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗ ವತಿಯಿಂದ ಹಮ್ಮಿಕೊಂಡಿದ್ದ ‘ವಾಯ್ಸ್ ಆಫ್ ಓಬಿಸಿ ಕಾರ್ಯಕ್ರಮ’ವನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ಉದ್ಘಾಟಿಸಿದರು   

ಗುಂಡ್ಲುಪೇಟೆ: ಓಬಿಸಿ ಸರ್ಮತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪಣ ತೊಟ್ಟಿದ್ದು, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಗೆ ಸಜ್ಜಾಗುವಂತೆ ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ಸಲಹೆ ನೀಡಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುಂಡ್ಲುಪೇಟೆ ಬ್ಲಾಕ್ ಹಾಗೂ ಬೇಗೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗ ವತಿಯಿಂದ ಹಮ್ಮಿಕೊಂಡಿದ್ದ ‘ವಾಯ್ಸ್ ಆಫ್ ಒಬಿಸಿ ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಎಲ್ಲಾ ಸಮಾಜದ ಕೊಡುಗೆ ಅಪಾರವಾಗಿದೆ. ಕಾಂಗ್ರೆಸ್ ಕೇವಲ ಒಂದು ಸಮಾಜ ಓಲೈಸಿಕೊಳ್ಳದೇ ಎಲ್ಲವನ್ನು ಸಮಾನವಾಗಿ ಕಾಣುತ್ತಿದೆ. ಜೊತೆಗೆ ಸಣ್ಣಪುಟ್ಟ ಸಮಾಜಕ್ಕೂ ಮನ್ನಣೆ ನೀಡುತ್ತಿದೆ ಎಂದು ತಿಳಿಸಿದರು.

ಒಬಿಸಿ ಸಮಾಜಕ್ಕೆ ಅನ್ಯಾಯವಾಗುವುದನ್ನು ತಡೆಯಲು ಕಾಂಗ್ರೆಸ್ ಪಕ್ಷ ವಿವಿಧ ಯೋಜನೆಗಳನ್ನು ರೂಪಿಸಿದೆ. ಮುಂಬರುವ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾಗಲಿದ್ದು, ಈಗಿನಿಂದಲೇ ಸಜ್ಜಾಗುವಂತೆ ಮುಖ್ಯಮಂತ್ರಿಗಳು ಕೂಡ ಸೂಚನೆ ನೀಡಿದ್ದಾರೆ. ಪಕ್ಷ ಅಧಿಕಾರದಲ್ಲಿದೆ ಎಂದು ಚುನಾವಣೆಗಳಲ್ಲಿ ಅತೀಯಾದ ಆತ್ಮವಿಶ್ವಾಸ ತೋರಿದರೆ ಹಿನ್ನಡೆಯಾಗಲಿದೆ. ಆದ್ದರಿಂದ ಆತ್ಮವಿಶ್ವಾಸದಿಂದ ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ADVERTISEMENT

ಸಾಮಾಜಿಕವಾಗಿ ವಿರೋಧ ಪಕ್ಷದವರು ಯೋಚನೆ ಮಾಡದೆ ಟೀಕೆ ಮಾಡುವುದರಲ್ಲೇ ತೊಡಗಿದ್ದಾರೆ. ಮುಂದಿನ ಎರಡುವರೆ ವರ್ಷಕ್ಕೆ ವಿಧಾನಸಭಾ ಚುನಾವಣೆ ಬರಲಿದ್ದು, ಆಗಲು ಕಾಂಗ್ರೆಸ್ ಗೆಲ್ಲಲು ಸಹಕಾರ ನೀಡಬೇಕು. ರಾಹುಲ್ ಗಾಂಧಿ ಹೇಳಿಕೆಯಂತೆ ಓಟ್ ಕಳ್ಳತನವಾಗಿರುವುದು ನಿಜ. ಆ ಹೋರಾಟದ ವಿರುದ್ಧ ಕೈಜೋಡಿಸಿ, ಸಹಿ ಸಂಗ್ರಹ ಅಭಿಯಾನ ಆರಂಭವಾಗಿದೆ. ತಾಲ್ಲೂಕಿನಲ್ಲಿ ಕನಿಷ್ಠ 25ರಿಂದ 30 ಸಾವಿರ ಸಹಿ ಆಗಬೇಕು. ಈ ಮೂಲಕ ಜನರಿಗೆ ಓಟಿನ ಬಗ್ಗೆ ಅರಿವು ಮೂಡಿಸಿದಂತಾಗುತ್ತದೆ ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ ರೈತರಿಗೆ ಸಾಗುವಳಿ ನೀಡುವುದು ದೊಡ್ಡ ಸಮಸ್ಯೆಯಾಗಿದೆ. ಕೆರೆಗಳಿಗೆ ನೀರು ತುಂಬಿಸುವುದು ಮತ್ತು ಸಾಗುವಳಿಗಾಗಿ ರೈತ ಸಂಘಟನೆಯವರು ಪ್ರತಿಭಟನೆ ಮಾಡುತ್ತಿದ್ದಾರೆ. ವಾಸ್ತವದ ಸತ್ಯವನ್ನು ಅವರೂ ಅರ್ಥ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಸಮಸ್ಯೆಯನ್ನು ಹಂತ ಹಂರತವಾಗಿ ಬಗೆಹರಿಸುತ್ತೇನೆ ಎಮದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿ ಹಾಗೂ ಚಾಮರಾಜನಗರ ಉಸ್ತುವಾರಿ ನಿಶ್ಚಿತ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ, ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಮಹದೇವಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಾಗರಾಜು, ಹಿಂದುಳಿದ ವರ್ಗಗಳ ಮೈಸೂರು ಜಿಲ್ಲಾಧ್ಯಕ್ಷ ನಾಗೇಶ್, ಪುರಸಭಾ ಅಧ್ಯಕ್ಷ ಶಶಿಧರ್ ಪಿ.ದೀಪು, ಉಪಾಧ್ಯಕ್ಷ ಶ್ರೀನಿವಾಸ್ ಕಣ್ಣಪ್ಪ, ಮಧುಸೂಧನ್, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ಮುನಿರಾಜು, ಮಾಜಿ ಉಪಾಧ್ಯಕ್ಷ ಕಬ್ಬಹಳ್ಳಿ ಮಹೇಶ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಬಿ.ರಾಜಶೇಖರ, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಗುರುಕಾಂತ್, ವಿಜಯಕುಮಾರ್, ಮಲೀಶೆಟ್ಟಿ, ಬಿ.ಜಿ.ಶಿವಕುಮಾರ್, ಜಿ.ಕೆ.ಲೋಕೇಶ್, ಭಾಗ್ಯಮ್ಮ ಹಾಜರಿದ್ದರು.

ಅಭಿವೃದ್ಧಿ ಕೆಲಸ ಪ್ರತಿ ಮನೆಗೂ ತಲುಪಿಸಿ
ಸರ್ಕಾರದ ಯೋಜನೆ ಹಾಗೂ ಅಭಿವೃದ್ಧಿ ಕೆಲಸಗಳ ಬಗ್ಗೆ ಗ್ರಾಮದ ಪ್ರತಿ ಮನೆ ಮನೆಗೂ ತಿಳಿಸುವ ಕೆಲಸ ಮಾಡಬೇಕು. ಇದರಿಂದ ಪಕ್ಷ ಸಂಘಟನೆಗೆ ಮುಂದಿನ ದಿನಗಳಲ್ಲಿ ಅನುಕೂಲವಾಗಲಿದೆ. ಜೊತೆಗೆ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರಲು ಸಹಕಾರಿಯಾಗುತ್ತದೆ. ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷ ಅಧಿಕಾರಕ್ಕೆ ತಂದರೆ ನಮ್ಮ ಕೆಲಸ ಜನರಿಗೆ ತಲುಪಿದೆ ಎಂದು ರಾಜ್ಯ ನಾಯಕರಿಗೆ ಸಂದೇಶ ಕೊಡಬಹದು. ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಯನ್ನು ಎಲ್ಲರ ಅಭಿಪ್ರಾಯ ಸಂಗ್ರಹಿಸಿಯೇ ಆಯ್ಕೆ ಮಾಡಿರುತ್ತೇವೆ. ಅವರನ್ನು ಬೆಂಬಲಿಸಬೇಕು. ಜೊತೆಗೆ ಸಂಘಟನೆ ವಿಚಾರದಲ್ಲಿ ಶಕ್ತಿ ಮೀರಿ ಕೆಲಸ ಮಾಡಬೇಕು ಎಂದು ಗಣೇಶ್ ಪ್ರಸಾದ್ ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.