ADVERTISEMENT

ಚಾಮರಾಜನಗರ: ಬೆಲೆ ಏರಿಕೆ ಖಂಡಿಸಿ 5ನೇ ದಿನವೂ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 13:09 IST
Last Updated 15 ಜೂನ್ 2021, 13:09 IST
ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಮುಖಂಡರು ಮಂಗಳವಾರವೂ ಪ್ರತಿಭಟನೆ ನಡೆಸಿದರು
ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಮುಖಂಡರು ಮಂಗಳವಾರವೂ ಪ್ರತಿಭಟನೆ ನಡೆಸಿದರು   

ಚಾಮರಾಜನಗರ: ಪೆಟ್ರೋಲ್ ಮತ್ತು ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಐದನೇ ದಿನ ಮಂಗಳವಾರವೂ ಪ್ರತಿಭಟನೆ ನಡೆಸಿದರು.

ಚಾಮರಾಜನಗರ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲ್ಲೂಕಿನ ದೊಡ್ಡರಾಯಪೇಟೆ ಸಮೀಪದ ಪೆಟ್ರೋಲ್ ಬಂಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ,ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ನಗರ ಬ್ಲಾಕ್‌ನ ಅಧ್ಯಕ್ಷ ಮಹಮದ್ ಅಸ್ಗರ್‌ಮುನ್ನಾ ಅವರು ಮಾತನಾಡಿದರು.

ADVERTISEMENT

ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್‌, ಎಪಿಎಂಸಿ ಅಧ್ಯಕ್ಷ ಡಿ.ನಾಗೇಂದ್ರ, ವಕೀಲ ಅರುಣ್‌ಕುಮಾರ್, ಕೂಡ್ಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಿ.ಸಿದ್ದರಾಜು, ಬೂದಿತಿಟ್ಟು ಲಿಂಗರಾಜು, ದೊಡ್ಡರಾಯಪೇಟೆ ಮೂರ್ತಿ, ರವಿಗೌಡ, ರಾಜು, ರೂಪೇಶ್, ಕೆಲ್ಲಂಬಳ್ಳಿ ಶ್ರೀನಿವಾಸನಾಯ್ಕ, ಸೋಮು, ಸಿದ್ದರಾಜು, ಶಿವಣ್ಣ, ಶಂಕರ್‌ಗುರು, ಪುಟ್ಟಸ್ವಾಮಿ, ಕರಿನಂಜನಪುರ ಎಂ.ಸ್ವಾಮಿ, ದೊರೆಸ್ವಾಮಿ, ಸಯ್ಯದ್ ಕೌಷಿಲ್, ಕುಮಾರ್, ಮಲ್ಲು, ಎಚ್.ಎಸ್.ನಾಗರಾಜು, ಪುಟ್ಟಣ್ಣ, ಬಸವಣ್ಣ, ಮಹೇಶ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.