ADVERTISEMENT

ಚಾಮರಾಜನಗರ: ವಿವಿಧೆಡೆ ಸಂವಿಧಾನ ದಿನ ಆಚರಣೆ, ಅಂಬೇಡ್ಕರ್‌ ಸ್ಮರಣೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2022, 2:30 IST
Last Updated 27 ನವೆಂಬರ್ 2022, 2:30 IST
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಅವರು ಅಂಬೇಡ್ಕರ್ ಭಾವಚಿತ್ರ ಹಾಗೂ ಸಂವಿಧಾನ ಪೀಠಿಕೆಗೆ ಪುಷ್ಪಾರ್ಚನೆ ಮಾಡಿದರು. ಪದಾಧಿಕಾರಿಗಳು, ಮುಖಂಡರು ಇದ್ದರು
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಅವರು ಅಂಬೇಡ್ಕರ್ ಭಾವಚಿತ್ರ ಹಾಗೂ ಸಂವಿಧಾನ ಪೀಠಿಕೆಗೆ ಪುಷ್ಪಾರ್ಚನೆ ಮಾಡಿದರು. ಪದಾಧಿಕಾರಿಗಳು, ಮುಖಂಡರು ಇದ್ದರು   

ಚಾಮರಾಜನಗರ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರ ಸಂವಿಧಾನ ದಿನವನ್ನು ಸರಳವಾಗಿ ಆಚರಿಸಲಾಯಿತು.

ಸರ್ಕಾರಿ ಕಚೇರಿ, ನ್ಯಾಯಾಲಯಗಳು, ಗ್ರಾಮ ಪಂಚಾಯಿತಿ ಕಚೇರಿ, ರಾಜಕೀಯ ಪಕ್ಷಗಳ ಕಚೇರಿ, ಶಾಲಾ ಕಾಲೇಜುಗಳಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಗಣ್ಯರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.

ಕಾಂಗ್ರೆಸ್‌ ಕಚೇರಿ: ನಗರದ ಸತ್ಯಮಂಗಲ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ, ‘ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ದೇಶಕ್ಕೆ ಒಪ್ಪುವಂತಹ ಸಂವಿಧಾನ ಸಮರ್ಪಣೆ ಮಾಡಿದ್ದು, ಕಾಂಗ್ರೆಸ್ ಪಕ್ಷವು ಅವರ ಆಶಯದಂತೆ ಕಾರ್ಯನಿರ್ವಹಿಸುತ್ತಿದೆ’ ಎಂದರು.

ADVERTISEMENT

ಅಂಬೇಡ್ಕರ್ ಅವರು 1949ರ ನ. 26ರಂದು ದೇಶಕ್ಕೆ ಸಂವಿಧಾನ ಸಮರ್ಪಣೆ ಮಾಡುವ ಮೂಲಕ ಸಮಗ್ರ ಅಭಿವೃದ್ದಿಗೆ ಕಾರಣರಾದರು ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮದ್ ಅಸ್ಗರ್, ಎ.ಎಸ್. ಗುರುಸ್ವಾಮಿ, ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಸಿ.ಎ.ಮಹದೇವಶೆಟ್ಟಿ, ಮುಖಂಡರಾದ ಎಸ್.ರಾಜು, ಕಾಗಲವಾಡಿ ಶಿವಸ್ವಾಮಿ ಇತರರು ಇದ್ದರು.

ಹರವೆ ಗ್ರಾಮ ಪಂಚಾಯಿತಿ: ತಾಲ್ಲೂಕಿನ ಹರವೆ ಗ್ರಾಮ ಪಂಚಾಯಿತಿ‌ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ನಂತರ ಮಾತನಾಡಿದ ಅವರು, ‘ವಿಶ್ವಕ್ಕೆ ಮಾದರಿಯಾದ ಶ್ರೇಷ್ಠ ಸಂವಿಧಾನ ನೀಡಿದ ಕೀರ್ತಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ.ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ನ.26ರನ್ನು ಸಂವಿಧಾನ ಸಮರ್ಪಣೆ ದಿನವನ್ನಾಗಿ ಘೋಷಣೆ ಮಾಡಿತ್ತು. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ದೇಶದ ಅಭಿವೃದ್ದಿಯಲ್ಲಿ ಸರ್ವ ಜನಾಂಗದ ಪ್ರಗತಿಯನ್ನು ‘ಸಬ್‌ಕೆ ಸಾಥ್ ಸಬ್‌ಕೆ ವಿಕಾಸ್‌’ ಘೋಷಣೆಯೊಂದಿಗೆ ಸಂವಿಧಾನ ಆಶಯಗಳನ್ನು ಜಾರಿ ಮಾಡುತ್ತಿದೆ’ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಮಣಿ, ಉಪಾಧ್ಯಕ್ಷ ಮಹಾದೇವಸ್ವಾಮಿ, ಸದಸ್ಯರಾದ ಎಚ್. ಎಸ್. ಗಿರೀಶ್. ಕೇತಹಳ್ಳಿ ಚಿಕ್ಕ ನಾಗಪ್ಪ. ಪಿಡಿಒ ಮಲ್ಲಿಕಾರ್ಜುನ್, ಎಪಿಎಂಸಿ ನಿರ್ದೇಶಕ ಮಹದೇವಪ್ರಸಾದ್, ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡುಪ್ರಕಾಶ್‌ ಇತರರು ಇದ್ದರು.

ದಲಿತ ಚಳವಳಿ ನವನಿರ್ಮಾಣ ವೇದಿಕೆ: ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಅಂಬೇಡ್ಕರ್‌ ಪ್ರತಿಮೆ ಬಳಿಕರ್ನಾಟಕ ದಲಿತ ಚಳವಳಿ ನವನಿರ್ಮಾಣ ವೇದಿಕೆ ಜಿಲ್ಲಾ ಸಮಿತಿ ಹಾಗೂ ಜಿಲ್ಲಾ ಅಂಬೇಡ್ಕರ್ ಸಂಘದ ವತಿಯಿಂದ ಸಂವಿಧಾನ ಸಮರ್ಪಣಾ ದಿನ ಆಚರಿಸಲಾಯಿತು.

ಪದಾಧಿಕಾರಿಗಳು ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ವೇದಿಕೆ ಸಂಚಾಲಕ ಸಂಘಸೇನ ಮಾತನಾಡಿದರು. ಶಿವನಾಗಣ್ಣ, ಸೋಮಸುಂದರ್, ವಿ,ಕೃಷ್ಣರಾಜು, ನಟಶೇಖರಮೂರ್ತಿ, ಕೆಂಪರಾಜು, ಶಿವಮಲ್ಲು, ಶಿವಯ್ಯ, ಮಹೇಶ್, ಪ್ರಸಾದ್, ಅಶೋಕ್, ನಾಗರಾಜು, ಸೋಮಶೇಖರ್ ಕೃಷ್ಣಮೂರ್ತಿ ಇತರರು ಇದ್ದರು.

ದೊಡ್ಡರಾಯಪೇಟೆ:ತಾಲೂಕಿನ ದೊಡ್ಡರಾಯಪೇಟೆಯಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಷಾರ್ಚನೆ ಮಾಡಿ ಸಂವಿಧಾನ ಪೀಠಿಕೆ ಓದಿದರು.

ವಕೀಲ ಅರುಣ್‌ಕುಮಾರ್ ಮಾತನಾಡಿದರು.ಗ್ರಾಮ ಪಂಚಾಯಿತಿ ಸದಸ್ಯ ಸಿದ್ದರಾಜು, ಮುಖಂಡರಾದ ಮೂರ್ತಿ, ಜೋಸೆಫ್, ಶಿವಶಂಕರ್, ಶೇಷಣ್ಣ, ಅಂಬೇಡ್ಕರ್ ಯುವಕರ ಸಂಘದ ಅಧ್ಯಕ್ಷ ಪ್ರತಾಫ್, ಲಿಂಗರಾಜು, ನಂದಕುಮಾರ್, ಸದಾನಂದ ಮುಕುಂದ ಇತರರು ಇದ್ದರು.

ನಗರದ ಎಂಸಿಎಸ್‌ ಶಿಕ್ಷಣ ಸಂಸ್ಥೆಯಲ್ಲೂ ಸಂವಿಧಾನ ದಿನ ಆಚರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.