ADVERTISEMENT

ಒಬ್ಬರ ಗಂಟಲ ದ್ರವ, ರಕ್ತದ ಮಾದರಿ ಪರೀಕ್ಷೆಗೆ

ಕೊರೊನಾ ಸೋಂಕು ತಡೆ: ಜಿಲ್ಲೆಯಲ್ಲಿ 9 ಜನರ ಮೇಲೆ ನಿಗಾ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2020, 9:00 IST
Last Updated 17 ಮಾರ್ಚ್ 2020, 9:00 IST
   

ಚಾಮರಾಜನಗರ: ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ವಿದೇಶದಿಂದ ಬಂದ ಒಂಬತ್ತು ಜನರ ಮೇಲೆ ಜಿಲ್ಲಾ ಆರೋಗ್ಯ ಇಲಾಖೆ ನಿಗಾ ಇಟ್ಟಿದ್ದು, ಒಬ್ಬರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಮೈಸೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

‘ಯಾರಲ್ಲೂ ಸೋಂಕಿನ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಎಲ್ಲರನ್ನೂ ಅವರ ಮನೆಯಲ್ಲೇ ಪ್ರತ್ಯೇಕವಾಗಿರಿಸಿ ನಿಗಾ ಇರಿಸಲಾಗುತ್ತಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಒಬ್ಬರ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಮೈಸೂರಿನ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಲಾಗಿದೆ. ಮಂಗಳವಾರ ಸಂಜೆ ಅಥವಾ ಬುಧವಾರ ಬೆಳಿಗ್ಗೆ ವರದಿ ಬರಬಹುದು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

100 ಹಾಸಿಗೆಗಳಿಗೆ ವಿಸ್ತರಣೆ: ಈ ಮಧ್ಯೆ, ನಗರದ ಅಂಬೇಡ್ಕರ್‌ ಭವನದಲ್ಲಿ ಸ್ಥಾಪಿಸಲಾಗಿರುವ ವಿಶೇಷ ನಿಗಾ ಘಟಕದ ಹಾಸಿಗೆಗಳ ಸಾಮರ್ಥ್ಯವನ್ನು 100 ಹಾಸಿಗೆಗಳಿಗೆ ವಿಸ್ತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.