ADVERTISEMENT

ಕೊಳ್ಳೇಗಾಲ | ನಿಗಮ –ಮಂಡಳಿ ನೇಮಕ: ಮಾಜಿ ಶಾಸಕ ಎಸ್‌.ಜಯಣ್ಣ ಅತೃಪ್ತಿ?

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2024, 14:31 IST
Last Updated 29 ಫೆಬ್ರುವರಿ 2024, 14:31 IST
<div class="paragraphs"><p>ಎಸ್‌.ಜಯಣ್ಣ</p></div>

ಎಸ್‌.ಜಯಣ್ಣ

   

ಕೊಳ್ಳೇಗಾಲ (ಚಾಮರಾಜನಗರ): ಇಲ್ಲಿನ ಮಾಜಿ ಶಾಸಕ ಎಸ್‌.ಜಯಣ್ಣ ಅವರನ್ನು ಕರ್ನಾಟಕ ರಾಜ್ಯ ಅನುಸೂಚಿತ ಜಾತಿ (ಎಸ್‌ಸಿ) ಅನುಸೂಚಿತ ಬುಡಕಟ್ಟುಗಳ (ಎಸ್‌ಟಿ) ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ನೇಮಕ ಜಯಣ್ಣ ಅವರಿಗೆ ಸಮಾಧಾನ ತಂದಿಲ್ಲ ಎಂದು ಅವರ ಆಪ್ತರು ತಿಳಿಸಿದ್ದಾರೆ. 

ನೇಮಕದ ಬಗ್ಗೆ ಮಾಹಿತಿ ತಿಳಿಯುತ್ತಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಜಯಣ್ಣ ಬೆಂಗಳೂರಿಗೆ ತೆರಳಿದ್ದಾರೆ. 

ADVERTISEMENT

ಪ್ರಮುಖವಾದ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಿದ್ದಾರೆ ಎಂದು ಅವರ ಆಪ್ತರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. 

‘ಜಯಣ್ಣ ಅವರು ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗ. ಪ್ರಮುಖ ನಿಗಮ–ಮಂಡಳಿಯನ್ನು ನೀಡದೆ ಅವರಿಗೆ ಅನ್ಯಾಯ ಮಾಡಲಾಗಿದೆ. ಇದು ಬೆಂಬಲಿಗರು, ಅಭಿಮಾನಿಗಳಿಗೆ ನೋವು ತಂದಿದೆ. ಎಸ್‌ಸಿ, ಎಸ್‌ಟಿ ಆಯೋಗದ ಅದ್ಯಕ್ಷರಾಗಲು ಅವರಿಗೆ ಇಷ್ಟವಿಲ್ಲ’ ಎಂದು ಅವರ ಆಪ್ತರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು. 

ಪ್ರತಿಕ್ರಿಯೆ ಪಡೆಯಲು ಜಯಣ್ಣ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.