ADVERTISEMENT

ಚಾಮರಾಜನಗರ: ದಿಢೀರ್‌ ಹೆಚ್ಚಿದ ಕೋವಿಡ್‌ ಪ್ರಕರಣ

ಹೊಸ 20 ಪ್ರಕರಣಗಳು ದೃಢ; ಕಾಲೇಜುಗಳ ಆರಂಭದ ಪರಿಣಾಮ?

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 16:07 IST
Last Updated 20 ನವೆಂಬರ್ 2020, 16:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ದಿಢೀರ್‌ ಏರಿಕೆಯಾಗಿದೆ. 20 ಮಂದಿಗೆ ಸೋಂಕು ದೃಢಪಟ್ಟಿದೆ.ಬಹುತೇಕರು ಕಾಲೇಜು ವಿದ್ಯಾರ್ಥಿಗಳು ಎಂದು ಗೊತ್ತಾಗಿದೆ.

ಕಾಲೇಜು ಆರಂಭವಾದ ನಂತರ ಎಲ್ಲ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದ್ದು, ಇದರಿಂದ ಪ್ರಕರಣಗಳು ವರದಿಯಾಗುತ್ತಿವೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಶುಕ್ರವಾರ 20 ಹೊಸ ಪ್ರಕರಣಗಳೊಂದಿಗೆ 20 ಮಂದಿ ಗುಣಮುಖರಾಗಿದ್ದಾರೆ. ಹೀಗಾಗಿ, ಸಕ್ರಿಯ ಪ್ರಕರಣಗಳಲ್ಲಿ (77) ವ್ಯತ್ಯಾಸವಾಗಿಲ್ಲ. ಸಾವಿನ ಪ್ರಕರಣ ವರದಿಯಾಗಿಲ್ಲ.

ADVERTISEMENT

ಇದರೊಂದಿಗೆ ಜಿಲ್ಲೆಯ ಪ್ರಕರಣಗಳ ಸಂಖ್ಯೆ 6,258 ಏರಿದೆ. ಗುಣಮುಖರಾದವರ ಸಂಖ್ಯೆ 6,024ಕ್ಕೆ ಏರಿದೆ. ಈವರೆಗೆ 108 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. 19 ಮಂದಿ ಬೇರೆ ಕಾರಣಕ್ಕೆ ಕೊನೆಯುಸಿರೆಳೆದಿದ್ದಾರೆ.

ಸಕ್ರಿಯ 77 ಪ್ರಕರಣಗಳಲ್ಲಿ 31 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದು, 14 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರ 1,270 ಮಂದಿಯ ಕೋವಿಡ್‌ ಪರೀಕ್ಷಾ ಫಲಿತಾಂಶ ಬಂದಿದ್ದು, 1,250 ವರದಿಗಳು ನೆಗೆಟಿವ್‌ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.