ADVERTISEMENT

ಸೋಂಕಿತರ ಏರಿಕೆ, ಸಾವಿನ ಸಂಖ್ಯೆ ಸ್ಥಿರತೆ

​ಪ್ರಜಾವಾಣಿ ವಾರ್ತೆ
Published 14 ಮೇ 2021, 8:32 IST
Last Updated 14 ಮೇ 2021, 8:32 IST

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ. 799 ಮಂದಿಗೆ ಕೊರೊನಾ ಸೋಂಕು ತಗುಲಿದೆ. 13 ಮಂದಿ ಮೃತಪಟ್ಟಿದ್ದಾರೆ. 652 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಗುರುವಾರ ಕೇವಲ 644 ಮಂದಿಯನ್ನು ಹೋಂಐಸೋಲೇಷನ್‌ಗೆ ಕಳುಹಿಸಲಾಗಿದೆ. ಒಟ್ಟು 2,693 ಮಂದಿ ಹೋಂ ಐಸೋಲೇಷನ್‌ಲ್ಲಿಯೇ ಇದ್ದಾರೆ. 50 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸ ಸೋಂಕಿತರ ಪೈಕಿ 167 ಮಂದಿ ಮಾತ್ರವೇ ಪಟ್ಟಣ ಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಇನ್ನುಳಿದ 632 ಮಂದಿ ವಿವಿಧ ಹಳ್ಳಿಗಳಿಗೆ ಸೇರಿದವರೇ ಆಗಿದ್ದಾರೆ. ಇವರಲ್ಲಿ 43 ಮಂದಿ ಮಕ್ಕಳೂ ಸೇರಿದ್ದಾರೆ.

ADVERTISEMENT

ಚಾಮರಾಜನಗರ ತಾಲ್ಲೂಕಿನಲ್ಲಿ 302, ಗುಂಡ್ಲುಪೇಟೆಯಲ್ಲಿ 194, ಕೊಳ್ಳೇಗಾಲದಲ್ಲಿ149, ಹನೂರು 100, ಯಳಂದೂರಿನಲ್ಲಿ 52 ಮಂದಿ ಹಾಗೂ ಹೊರಜಿಲ್ಲೆಯ ಇಬ್ಬರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.