ADVERTISEMENT

ಚಾಮರಾಜನಗರ: ಆಯ್ದ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ನೀಡುವ ಅಣಕು ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 6 ಜನವರಿ 2021, 14:28 IST
Last Updated 6 ಜನವರಿ 2021, 14:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯ ಆಯ್ದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರುಸೇರಿದಂತೆ ಆರೋಗ್ಯ ಕಾರ್ಯಕರ್ತರು ಹಾಗೂ ಸಿಬ್ಬಂದಿಗೆ ಪ್ರಾಯೋಗಿಕವಾಗಿ ಕೋವಿಡ್ ಲಸಿಕೆ ನೀಡುವ ಸಲುವಾಗಿ ಅಣಕು ಪ್ರದರ್ಶನವನ್ನು ಶುಕ್ರವಾರ (ಜ.8) ಹಮ್ಮಿಕೊಳ್ಳಲಾಗಿದೆ.

ಚಾಮರಾಜನಗರದ ಜಿಲ್ಲಾ ಆಸ್ಪತ್ರೆ, ಜೆಎಸ್ಎಸ್ ಆಸ್ಪತ್ರೆ, ಗುಂಡ್ಲುಪೇಟೆಯ ತಾಲ್ಲೂಕು ಆಸ್ಪತ್ರೆ, ಹನೂರು ತಾಲ್ಲೂಕಿನ ರಾಮಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಸೇರಿದಂತೆ ತಲಾ 25 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡುವ ಅಣಕು ಪ್ರದರ್ಶನ ನಡೆಯಲಿದೆ.

6,350 ಮಂದಿ ನೋಂದಣಿ:ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಕೋವಿಡ್ ಲಸಿಕೆ ನೀಡಲು6,350 ಆರೋಗ್ಯ ಕಾರ್ಯಕರ್ತರನ್ನು ನೋಂದಾಯಿಸಿಕೊಳ್ಳಲಾಗಿದೆ. ಕೋವಿಡ್ ಲಸಿಕೆ ನೀಡುವ ಸಂಬಂಧ ಎಲ್ಲ ಆಸ್ಪತ್ರೆ ಆರೋಗ್ಯ ಸಂಸ್ಥೆಗಳಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

1,385 ಪರೀಕ್ಷೆ, ನಾಲ್ಕು ಪ್ರಕರಣ

ಈ ಮಧ್ಯೆ ಜಿಲ್ಲೆಯಲ್ಲಿ ಬುಧವಾರ 1,385 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಈ ಪೈಕಿ ನಾಲ್ವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಆರು ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 68ಕ್ಕೆ ಇಳಿದಿದೆ.

44 ಮಂದಿ ಸೋಂಕಿತರು ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದು, ಐಸಿಯುನಲ್ಲಿ ಒಬ್ಬರು ಮಾತ್ರ ಇದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 6,806 ಪ್ರರಕಣಗಳು ದೃಢಪಟ್ಟಿವೆ. 6,607 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಸಂಖ್ಯೆ ಬದಲಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.