ADVERTISEMENT

ಚಾಮರಾಜನಗರ: 108 ಹೊಸ ಪ್ರಕರಣ, 48 ಮಂದಿ ಕೊರೊನಾ ಸೋಂಕು ಮುಕ್ತ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 14:55 IST
Last Updated 2 ಅಕ್ಟೋಬರ್ 2020, 14:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 108 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 48 ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಜಿಲ್ಲೆಯಲ್ಲಿ ಈವರೆಗೆ 4,252 ಮಂದಿಗೆ ಸೋಂಕು ತಗುಲಿದೆ. 3,363 ಮಂದಿ ಗುಣಮುಖರಾಗಿದ್ದಾರೆ. 794 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 343 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 40 ಮಂದಿ ಐಸಿಯುನಲ್ಲಿ ಇದ್ದಾರೆ. ಸೋಂಕಿನಿಂದಾಗಿ 67 ಮಂದಿ ಹಾಗೂ ಕೋವಿಡ್‌ಯೇತರ ಕಾರಣದಿಂದ 28 ಮಂದಿ ಮೃತಪಟ್ಟಿದ್ದಾರೆ.

ಶುಕ್ರವಾರ 857 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ, 573 ಆರ್‌ಟಿಪಿಸಿಆರ್‌, 252 ರ‍್ಯಾಪಿಡ್‌ ಆ್ಯಂಟಿಜೆನ್‌, 32 ಟ್ರುನಾಟ್‌ ಪರೀಕ್ಷೆಗಳು. 749 ಮಂದಿಯ ವರದಿಗಳು ನೆಗೆಟಿವ್‌ ಬಂದಿವೆ. 108 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ.

ADVERTISEMENT

ಜಿಲ್ಲೆಯಲ್ಲಿ ಇದುವರೆಗೆ 65,039 ಕೋವಿಡ್‌ ಪ‍ರೀಕ್ಷೆಗಳನ್ನು ನಡೆಸಲಾಗಿದ್ದು, 60,861 ವರದಿಗಳು ನೆಗೆಟಿವ್ ಬಂದಿವೆ.

56,282 ಮಂದಿ ಮೇಲೆ ನಿಗಾ: ಸೋಂಕಿತರ 26,481 ಮಂದಿ ಪ್ರಾಥಮಿಕ ಸಂಪರ್ಕಿತರು ಹಾಗೂ 29,801 ಜನ ದ್ವಿತೀಯ ಸಂಪರ್ಕಿತರು ಸೇರಿದಂತೆ 56,282 ಮಂದಿ ಮನೆ ಕ್ವಾರಂಟೈನ್‌ನಲ್ಲಿದ್ದು, ಜಿಲ್ಲಾಡಳಿತ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ.

ಹೊಸ ವೈದ್ಯರ ನೇಮಕ: ಈ ಮಧ್ಯೆ, ಜಿಲ್ಲಾಸ್ಪತ್ರೆಗೆ 24 ಮಂದಿ ವೈದ್ಯರನ್ನು ಸರ್ಕಾರ ನೇಮಕ ಮಾಡಿದೆ. ಇವರೆಲ್ಲರೂ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದರೊಂದಿಗೆ ಆಸ್ಪತ್ರೆಯಲ್ಲಿದ್ದ ವೈದ್ಯರ ಕೊರತೆ ನೀಗಿದಂತಾಗಿದೆ. ಕೋವಿಡ್‌ ಚಿಕಿತ್ಸೆಗೆ ಅನುಕೂಲವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.