ADVERTISEMENT

ಚಾಮರಾಜನಗರ: 44 ಹೊಸ ಕೋವಿಡ್ ಪ್ರಕರಣ, 43 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 13:26 IST
Last Updated 27 ಸೆಪ್ಟೆಂಬರ್ 2020, 13:26 IST
ಚಾಮರಾಜನಗರದ ಕೋವಿಡ್‌ ಆಸ್ಪತ್ರೆ
ಚಾಮರಾಜನಗರದ ಕೋವಿಡ್‌ ಆಸ್ಪತ್ರೆ   

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 44 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 43 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ ಯೇತರ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ.

ಬಹು ಅಂಗಾಗಗಳ ವೈಫಲ್ಯದಿಂದ ಬಳಲುತ್ತಿದ್ದ ಚಾಮರಾಜನಗರ ತಾಲ್ಲೂಕಿನ ಕಾಡಹಳ್ಳಿ ಗ್ರಾಮದ ನಿವಾಸಿ 41 ವರ್ಷದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಭಾನುವಾರದ ಅಂಕಿ ಅಂಶಗಳು ಸೇರಿದಂತೆ ಜಿಲ್ಲೆಯಲ್ಲಿ ಈವರೆಗೆ 3825 ಪ್ರಕರಣಗಳು ವರದಿಯಾಗಿವೆ. 3,105 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದಾಗಿ 60 ಜನರು ಮೃತಪಟ್ಟಿದ್ದರೆ, ಕೋವಿಡ್‌ಯೇತರ ಕಾರಣದಿಂದಾಗಿ 27 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ADVERTISEMENT

ಸದ್ಯ 633 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 45 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರ 655 ಮಂದಿಗೆ ‌ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 618 ಮಂದಿಯ ವರದಿ‌ ನೆಗೆಟಿವ್ ಬಂದಿದೆ. 37 ಮಂದಿಗೆ ಸೋಂಕಿರುವುದು ಖಚಿತವಾಗಿದೆ. ಏಳು ಪ್ರಕರಣಗಳು ಮೈಸೂರಿನಲ್ಲಿ ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.