ಮಳೆ
(ರಾಯಿಟರ್ಸ್ ಚಿತ್ರ)
ಚಾಮರಾಜನಗರ: ಫೆಂಗಸ್ ಚಂಡಮಾರುತದ ಪ್ರಭಾವದಿಂದ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿರುವ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಸೋಮವಾರ ಶಾಲಾ ಕಾಲೇಜುಗಳಿಗೆ (ಪದವಿಪೂರ್ವ) ರಜೆ ಘೋಷಣೆ ಮಾಡಿದೆ.
ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ, ರಜೆ ದಿನದ ಕಲಿಕೆಯನ್ನು ಭಾನುವಾರ ಸರಿದೂಗಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.