ADVERTISEMENT

ಸಿಲಿಂಡರ್ ಸೋರಿಕೆ: ಮನೆ ಸಂಪೂರ್ಣ ಭಸ್ಮ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 3:45 IST
Last Updated 1 ಮಾರ್ಚ್ 2021, 3:45 IST
ಕೊಳ್ಳೇಗಾಲ ದೇವಾಂಗ ಪೇಟೆಯ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ಮನೆ ಸಂಪೂರ್ಣ ಭಸ್ಮವಾಗಿದೆ
ಕೊಳ್ಳೇಗಾಲ ದೇವಾಂಗ ಪೇಟೆಯ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ಮನೆ ಸಂಪೂರ್ಣ ಭಸ್ಮವಾಗಿದೆ   

ಕೊಳ್ಳೇಗಾಲ: ಇಲ್ಲಿನ ದೇವಾಂಗ ಪೇಟೆಯ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ಮನೆ ಸಂಪೂರ್ಣ ಭಸ್ಮವಾಗಿದೆ.

ಬಡಾವಣೆಯ ನಿವಾಸಿ ಸಂಜೀವಮ್ಮ ಅವರ ಮನೆಯಲ್ಲಿ ಭಾನುವಾರ ಬೆಳಿಗ್ಗೆ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ, ಹೆಂಚಿನ ಚಾವಣಿಗೆ ಬೆಂಕಿ ಬಿದ್ದಿದೆ. ಈ ಸಮಯದಲ್ಲಿ ಸಂಜೀವಮ್ಮ ಅವರು ಮನೆಯಲ್ಲಿರಲಿಲ್ಲ. ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.

ಈ ಅನಾಹುತದಿಂದ ಯಾವುದೇ ಜೀವ ಹಾನಿ ಆಗಿಲ್ಲ. ಆದರೆ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ಭಸ್ಮವಾಗಿದೆ. ಚಾವಣಿ ಕುಸಿದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.