ಚಾಮರಾಜನಗರ: ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯದಿಂದ 1.70 ಲಕ್ಷ ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ಕಾವೇರಿ ನದಿಗೆ ನೀರು ಹರಿಸತ್ತಿರುವ ಪರಿಣಾಮ ಕೊಳ್ಳೇಗಾಲ ತಾಲ್ಲೂಕಿನ ನದಿಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು,ಆಸ್ತಿ ಹಾಗೂ ಜಾನುವಾರುಗಳ ರಕ್ಷಣೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದ್ದಾರೆ.
ನದಿಯ ತಗ್ಗು ಪ್ರದೇಶಗಳಲ್ಲಿರುವ ಮುಳ್ಳೂರು, ದಾಸನಪುರ, ಹಳೇ ಹಂಪಾಪುರ, ಹೊಸ ಹಂಪಾಪುರ, ಹಳೆ ಅಣಗಳ್ಳಿ, ಯಡಕುರಿಯ, ಧನಗೆರೆ, ಹರಳೆ, ಅಗ್ರಹಾರ ಮತ್ತು ಸರಗೂರು ಗ್ರಾಮಗಳ ಗ್ರಾಮಸ್ಥರು ತುರ್ತು ಸಂದರ್ಭದಲ್ಲಿ ಸ್ಥಳೀಯ ಆಡಳಿತದ ಅಧಿಕಾರಿಗಳು ನೀಡುವ ಸಲಹೆ, ಸೂಚನೆ ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು. ಕಾಳಜಿ ಕೇಂದ್ರಗಳಿಗೆ ತೆರಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಹಾಗೂ ಸುರಕ್ಷಿತ ಕ್ರಮಗಳನ್ನು ತೆಗೆದುಕೊಂಡಿದ್ದು ಗ್ರಾಮಸ್ಥರು ವದಂತಿಗಳಿಗೆ ಕಿವಿಗೊಡಬಾರದು, ಭೀತಿಗೆ ಒಳಗಾಗಬಾರದು. ಜಾನುವಾರುಗಳಿಗೆ ಕೊಳ್ಳೇಗಾಲ ಪಟ್ಟಣದ ಎಪಿಎಂಸಿ ಅವರಣದಲ್ಲಿ ಹಾಗೂ ಗ್ರಾಮದ ಎತ್ತರದ ಸ್ಥಳಗಳಲ್ಲಿ ಗೋಶಿಬಿರಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ತುರ್ತು ಸಂದರ್ಭಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ವಿಪತ್ತು ನಿರ್ವಹಣಾ ಕೇಂದ್ರ 08226-223160, 08226-223161, 08226-223163 ಟೋಲ್ ಫ್ರೀ ಸಂಖ್ಯೆ 1077, ಮೊಬೈಲ್ 9740942901, ಕೊಳ್ಳೇಗಾಲ ಉಪವಿಭಾಗಾಧಿಕಾರಿ 8277863119, 9900582341, ಕೊಳ್ಳೇಗಾಲ ತಹಶೀಲ್ದಾರ್ 7892979473, ಕೊಳ್ಳೇಗಾಲ ತಾಲ್ಲೂಕು ಕಚೇರಿಯ ಸಹಾಯವಾಣಿ ಸಂಖ್ಯೆ 08224-252329 ಸಂಪರ್ಕಿಸಬಹುದು.
ಪೊಲೀಸ್, ಅಗ್ನಿಶಾಮಕ, ಆರೋಗ್ಯ ಇಲಾಖೆ, ತಾಲ್ಲೂಕು ಪಂಚಾಯಿತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಪ್ರವಾಹ ಪೀಡಿತ ಗ್ರಾಮಗಳಲ್ಲಿ ಇದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.