
ಚಾಮರಾಜನಗರ: ನಗರದ ಹೊರ ವಲಯದ ಯಡಪುರದ ಬಳಿ ಇರುವ ಸಿಮ್ಸ್ ಆಸ್ಪತ್ರೆಗೆ ಶುಕ್ರವಾರ ಜಿಲ್ಲಾಧಿಕಾರಿ ಶ್ರೀರೂಪಾ ಭೇಟಿನೀಡಿ ಪರಿಶೀಲಿಸಿದರು.
ಹೊರ ರೋಗಿಗಳ ವಿಭಾಗದ ನೋಂದಣಿ ಘಟಕ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ ತುರ್ತು ಚಿಕಿತ್ಸಾ ಘಟಕ ಹಾಗೂ ವಾರ್ಡ್‌ಗಳಿಗೆ ತೆರಳಿ ಪರಿಶೀಲಿಸಿದರು. ಒಳರೋಗಿಯಾಗಿ ದಾಖಲಾಗಿದ್ದ ರೋಗಿಗಳ ಬಳಿ ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಚಿಕಿತ್ಸೆ, ಊಟ, ತಿಂಡಿಯ ಗುಣಮಟ್ಟದ ಬಗ್ಗೆ ವಿಚಾರಿಸಿದರು.
ವೈದ್ಯಕೀಯ ಕಾಲೇಜಿನ ಡೀನ್ ಡಾ.ಎಚ್.ಜಿ.ಮಂಜುನಾಥ್ ಅಸ್ಪತ್ರೆಯಲ್ಲಿ ದೊರೆಯುವ ವೈದ್ಯಕೀಯ ಸೌಲಭ್ಯ ಹಾಗೂ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಮಾಹಿತಿ ನೀಡಿದರು. ತುರ್ತು ಚಿಕಿತ್ಸಾ ಘಟಕದ ಮುಖ್ಯಸ್ಥ ಡಾ.ಅಭಿಷೇಕ್, ತಹಶೀಲ್ದಾರ್ ಗಿರಿಜಾ, ರಾಜಸ್ವ ನಿರೀಕ್ಷಕ ರಾಜಶೇಖರ್, ಗುರುಸಿದ್ದಪ್ಪ, ಗ್ರಾಮ ಆಡಳಿತಾಧಿಕಾರಿ ರಮೇಶ್, ವೈದ್ಯರು ಮತ್ತು ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.