ADVERTISEMENT

ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ದಿಢೀರ್‌ ಭೇಟಿ

ಕಡತಗಳ ಪರಿಶೀಲಿಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ತರಾಟೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2020, 16:04 IST
Last Updated 5 ಫೆಬ್ರುವರಿ 2020, 16:04 IST
ಕಡತಗಳ ಪರಿಶೀಲನೆಗೆ ಮುಂದಾಗಿರುವ ಜಿಲ್ಲಾಧಿಕಾರಿ ರವಿ
ಕಡತಗಳ ಪರಿಶೀಲನೆಗೆ ಮುಂದಾಗಿರುವ ಜಿಲ್ಲಾಧಿಕಾರಿ ರವಿ   

ಚಾಮರಾಜನಗರ:ತಾಲ್ಲೂಕು ಕಚೇರಿ ನೂತನ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ಬುಧವಾರ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲ್ಲೂಕು ಕಚೇರಿಯ ಎಲ್ಲ ಕೊಠಡಿಗಳಿಗೆ ಭೇಟಿ ನೀಡಿದ ರವಿ ಅವರು ಬಾಕಿ ಉಳಿದಿರುವ ಕಡತಗಳನ್ನು ಪರಿಶೀಲಿಸಿದರು. ಬಳಿಕ ಕಚೇರಿ ಅಧಿಕಾರಿಗಳ ಕಾರ್ಯ ವೈಖರಿ ಕಂಡು ಗರಂ ಆದರು. ಕಡತಗಳ ಬಗ್ಗೆ ಮಾಹಿತಿ ಪಡೆದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬೆಳಿಗ್ಗೆ11ಗಂಟೆಗೆ ಕಚೇರಿಗೆ ಆಗಮಿಸಿದ ಜಿಲ್ಲಾಧಿಕಾರಿಗಳು ಕಚೇರಿ ಮುಂಭಾಗ ನೆರೆದಿದ್ದಸಾರ್ವಜನಿಕರತ್ತಹೋದರು. ಇದೇ ಸಂದರ್ಭದಲ್ಲಿ ‘ನಾವುತಹಶೀಲ್ದಾರ್‌ ಅವರಿಗಾಗಿ ಕಾಯುತ್ತಿದ್ದೇವೆ’ ಎಂದು ಹೇಳುತ್ತಾ ಸಾರ್ವಜನಿಕರು ಸಮಸ್ಯೆ ಬಿಚ್ಚಿಟ್ಟರು.

ADVERTISEMENT

ತಡವಾಗಿ ಬಂದ ತಹಶೀಲ್ದಾರ್:ಪ್ರತಿ ಕೊಠಡಿಗಳಿಗೂ ತೆರಳಿದ ಜಿಲ್ಲಾಧಿಕಾರಿಗಳು ಹಾಜರಾತಿಗಮನಿಸಿಅಧಿಕಾರಿಗಳ ಬಗ್ಗೆ ಮಾಹಿತಿ ಪಡೆದರು. ‘ಏಕೆ ಇಷ್ಟೊಂದು ಸಾರ್ವಜನಿಕರು ಕಚೇರಿಯತ್ತ ಸುತ್ತಾಡುತ್ತಿದ್ದಾರೆ’ ಎಂದು ತಡವಾಗಿ ಆಗಮಿಸಿದ ತಹಶೀಲ್ದಾರ್‌ ಮಹೇಶ್‌ ಅವರನ್ನು ಜಿಲ್ಲಾಧಿಕಾರಿಗಳು ಪ್ರಶ್ನಿಸಿದರು.

ವರ್ಷವಾದರೂಸಾರ್ವಜನಿಕರಕೆಲಸಗಳು ಆಗುತ್ತಿಲ್ಲ ಎಂಬ ದೂರು ಕೇಳಿ ಬರುತ್ತಿದೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಕಡತಗಳ ಪರಿಶೀಲನೆ ನಡೆಸಿದ ಅವರು, ‘ಯಾವ ಅಧಿಕಾರಿಯಬಳಿ ಕಡತಗಳು ಉಳಿದಿವೆ ಎನ್ನುವುದರ ಬಗ್ಗೆ ಸಂಜೆಯೊಳಗೆ ಸಂಪೂರ್ಣ ಮಾಹಿತಿ ನೀಡಬೇಕು’ ಎಂದುತಾಕೀತು ಮಾಡಿದರು.

‘ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವೃದ್ಧಾಪ್ಯ ವೇತನ, ವಿಧವಾವೇತನ ಇನ್ನಿತರ ಸೌಲಭ್ಯಗಳಅಗತ್ಯ ದಾಖಲೆಗಳೊಂದಿಗೆ ತಹಶೀಲ್ದಾರ್ ಕಚೇರಿಗೆ ಆಗಮಿಸಿದರೆ ಇಲ್ಲಿನ ಕೆಲ ಸಿಬ್ಬಂದಿ, ನಾಳೆ ಬನ್ನಿ, ನಾಡಿದ್ದು ಬನ್ನಿ ಎಂದು ಆರು ತಿಂಗಳಿಂದ ಸತಾಯಿಸುತ್ತಿದ್ದಾರೆ’ ಎಂದು ಸಾರ್ವಜನಿಕರು ದೂರು ನೀಡಿದರು.

‘ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರಿಗೆ ಮೂಲಸೌಕರ್ಯ ಕಲ್ಪಿಸಬೇಕು. ಸ್ವಚ್ಛತೆ ಕಾಪಾಡಬೇಕು. ಸಿಬ್ಬಂದಿ ಸಮರ್ಪಕವಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ಈ ಬಗ್ಗೆ ಸಾರ್ವಜನಿಕರಿಂದ ನನಗೆ ದೂರು ನೀಡಿದರೆ ನಿರ್ದಾಕ್ಷಿಣ್ಯಗವಾಗಿ ಕ್ರಮಕೈಗೊಳ್ಳುತ್ತೇನೆ’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.