ಸಾವು (ಪ್ರಾತಿನಿಧಿಕ ಚಿತ್ರ)
ಕೊಳ್ಳೇಗಾಲ: ಇಲ್ಲಿನ ಬಸ್ ನಿಲ್ದಾಣದ ಪ್ರೀತಮ್ ವೈನ್ಸ್ ಮುಂಭಾಗದ ರಸ್ತೆಯಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ.
ಸುಮಾರು 40ರಿಂದ 45 ವಯಸ್ಸಿನವರಾಗಿದ್ದು, ಮೈಮೇಲೆ ಬಿಳಿ ಗೆರೆಯುಳ್ಳ ತಿಳಿ ನೀಲಿ ಬಣ್ಣದ ಟೀಶರ್ಟ್ ಹಾಗೂ ಖಾಕಿ ಬಣ್ಣದ ಚಡ್ಡಿ ಧರಿಸಿದ್ದಾರೆ.
ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮೃತ ದೇಹವನ್ನು ಚಾಮರಾಜನಗರ ಆಸ್ಪತ್ರೆಗೆ ರವಾನಿಸಿದ್ದಾರೆ.
ನಗರ ಪೊಲೀಸ್ ಠಾಣೆಯ ಎಎಸ್ಐ ಶಂಕರರಾಜು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಾರಸುದಾರರು ಇದ್ದಲ್ಲಿ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 08224-252368ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.