ADVERTISEMENT

ಜಿಂಕೆ ಕೊಂಬು ಸಾಗಣೆ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2023, 15:22 IST
Last Updated 23 ಆಗಸ್ಟ್ 2023, 15:22 IST
ಆರೋಪಿಗಳಿಂದ ವಶಪಡಿಸಿಕೊಂಡಿರುವ ಜಿಂಕೆ ಕೊಂಬುಗಳು
ಆರೋಪಿಗಳಿಂದ ವಶಪಡಿಸಿಕೊಂಡಿರುವ ಜಿಂಕೆ ಕೊಂಬುಗಳು   

ಕೊಳ್ಳೇಗಾಲ: ಅಕ್ರಮವಾಗಿ ಜಿಂಕೆ ಕೊಂಬುಗಳನ್ನು ಬೈಕ್‌ನಲ್ಲಿ ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.

ಹನೂರು ತಾಲ್ಲೂಕಿನ ಹುಣಸೆಪಾಳ್ಯ ಗ್ರಾಮದ ಈರಣ್ಣ (49) ಹಾಗೂ ಆರ್ಯ.ಎಂ (22) ಬಂಧಿತ ಆರೋಪಿಗಳು. ಇವರಿಂದ 12 ಕೊಂಬುಗಳು ಹಾಗೂ ಹೋಂಡಾ ಶೈನ್ ಬೈಕ್ ವಶಪಡಿಸಿಕೊಳ್ಳಲಾಗಿದೆ.

ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ದಳದ ಪಿಎಸ್ಐ ವಿಜಯರಾಜು ಹಾಗೂ ಸಿಬ್ಬಂದಿ ಚೆನ್ನಾಲಿಂಗನಹಳ್ಳಿ ಗ್ರಾಮದ ಹೋಗುವ ಅಡ್ಡರಸ್ತೆಯಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಜಿಂಕೆ ಕೊಂಬುಗಳ ಸಮೇತ ಬಂಧಿಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.