ADVERTISEMENT

ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಪೌರಾಯುಕ್ತರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 3:06 IST
Last Updated 22 ಫೆಬ್ರುವರಿ 2026, 3:06 IST
ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡುವಂತೆ ಒತ್ತಾಯಿಸಿ ನಗರಸಭೆ ಕಚೇರಿಯಲ್ಲಿ ಪೌರಾಯುಕ್ತ ಪರಶುರಾಮ ಛಲವಾದಿ ಅವರಿಗೆ ಮನವಿ ಸಲ್ಲಿಸಲಾಯಿತು
ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡುವಂತೆ ಒತ್ತಾಯಿಸಿ ನಗರಸಭೆ ಕಚೇರಿಯಲ್ಲಿ ಪೌರಾಯುಕ್ತ ಪರಶುರಾಮ ಛಲವಾದಿ ಅವರಿಗೆ ಮನವಿ ಸಲ್ಲಿಸಲಾಯಿತು   

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಮುಖಂಡ ವಿಜಯ ಕುಮಾರ್ ಜಟ್ಟಪ್ಪ ನೇತೃತ್ವದಲ್ಲಿ ನಗರಸಭೆ ಕಚೇರಿಯಲ್ಲಿ ಪೌರಾಯುಕ್ತ ಪರಶುರಾಮ ಛಲವಾದಿ ಅವರಿಗೆ ಮನವಿ ಸಲ್ಲಿಸಲಾಯಿತು.

2020-21ರಿಂದಲೂ  ಚಾಮರಾಜನಗರದಲ್ಲಿ ಸುಸಜ್ಜಿತ ವಿದ್ಯುತ್ ಚಾಲಿತ ಚಿತಾಗಾರ ನಿರ್ಮಾಣಕ್ಕೆ ಹೋರಾಟ ಮಾಡಲು ಒತ್ತಾಯ ಮಾಡಿಕೊಂಡು ಬಂದಿದ್ದೇವೆ. ಜಿಲ್ಲೆಯ ಶಾಸಕರು, ಸಂಸದರು, ಉಸ್ತುವಾರಿ ಸಚಿವರು, ಮುಖ್ಯಮಂತ್ರಿ, ಜಿಲ್ಲಾಧಿಕಾರಿ ಸಹಿತ ಎಲ್ಲರಿಗೂ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ.

2024-25ನೇ ಸಾಲಿನ ಬಜೆಟ್‌ನಲ್ಲಿ ಅಂದಿನ ಆಡಳಿತಾಧಿಕಾರಿಗಳು ವಿದ್ಯುತ್ ಚಾಲಿತ ಚಿತಾಗಾರಕ್ಕೆ ₹ 2.50 ಕೋಟಿ ಮೀಸಲು ಇಟ್ಟಿದ್ದರೂ ಬಳಕೆಯಾಗಿಲ್ಲ. 2026-27ನೇ ಸಾಲಿನ ಆಯವ್ಯಯದಲ್ಲಿ ವಿದ್ಯುತ್ ಚಾಲಿತ ಚಿತಾಗಾರದ ಕಾಮಗಾರಿ ಆರಂಭಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ಈ ಸಂದರ್ಭ ಮುಖಂಡರಾದ ವೇಲುಮಣಿ, ಮಹದೇವಪ್ಪ, ರಂಗಸ್ವಾಮಿ ನಾಯಕ, ಅಮಚವಾಡಿ ಶಿವಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.