ADVERTISEMENT

ಕೆರೆ ಜಾಗ ಒತ್ತುವರಿ ತೆರವುಗೊಳಿಸಲು ಆಗ್ರಹ: ಏಳನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2024, 15:31 IST
Last Updated 24 ಆಗಸ್ಟ್ 2024, 15:31 IST
ಕೊಳ್ಳೇಗಾಲ ಕೆರೆ ಜಾಗ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿ ತಾಲ್ಲೂಕು ಗುಂಡಾಲ್ ಜಲಾಶಯದ ಸ್ಥಿರ ಅಚ್ಚುಕಟ್ಟು ವ್ಯಾಪ್ತಿಯ ರೈತರ ಹಿತರಕ್ಷಣಾ ಸಂಘದ ವತಿಯಿಂದ ಕಾವೇರಿ ನೀರಾವರಿ ಇಲಾಖೆಯ ಕಚೇರಿಯ ಮುಂದೆ 6ನೇ ದಿನವಾದ ಶನಿವಾರ ಧರಣಿ ಸತ್ಯಾಗ್ರಹ ನಡೆಯಿತು
ಕೊಳ್ಳೇಗಾಲ ಕೆರೆ ಜಾಗ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿ ತಾಲ್ಲೂಕು ಗುಂಡಾಲ್ ಜಲಾಶಯದ ಸ್ಥಿರ ಅಚ್ಚುಕಟ್ಟು ವ್ಯಾಪ್ತಿಯ ರೈತರ ಹಿತರಕ್ಷಣಾ ಸಂಘದ ವತಿಯಿಂದ ಕಾವೇರಿ ನೀರಾವರಿ ಇಲಾಖೆಯ ಕಚೇರಿಯ ಮುಂದೆ 6ನೇ ದಿನವಾದ ಶನಿವಾರ ಧರಣಿ ಸತ್ಯಾಗ್ರಹ ನಡೆಯಿತು   

ಕೊಳ್ಳೇಗಾಲ: ಕೆರೆ ಜಾಗ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿ ತಾಲ್ಲೂಕು ಗುಂಡಾಲ್ ಜಲಾಶಯದ ಸ್ಥಿರ ಅಚ್ಚುಕಟ್ಟು ವ್ಯಾಪ್ತಿಯ ರೈತರ ಹಿತರಕ್ಷಣಾ ಸಂಘದ ವತಿಯಿಂದ ಕಾವೇರಿ ನೀರಾವರಿ ಇಲಾಖೆಯ ಕಚೇರಿಯ ಮುಂದೆ 6ನೇ ದಿನವಾದ ಶನಿವಾರವೂ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಯಿತು.

ನಗರದ ಕಚೇರಿ ಮುಂದೆ ಸಮಾವೇಶಗೊಂಡ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕು ಗುಂಡಾಲ್ ಜಲಾಶಯದ ಸ್ಥಿರ ಅಚ್ಚುಕಟ್ಟು ವ್ಯಾಪ್ತಿಯ ರೈತರ ಹಿತರಕ್ಷಣಾ ಸಂಘದ ಅಧ್ಯಕ್ಷ ದಶರತ್ ಮಾತನಾಡಿ, ಇಂದಿಗೆ ನಮ್ಮ ಪ್ರತಿಭಟನೆ ಆರು ದಿನ ಪೂರೈಸಿದೆ, ಹೀಗಿದ್ದರೂ ಯಾವ ಅಧಿಕಾರಿಗಳೂ ಬಂದು ನಮ್ಮ ಸಮಸ್ಯೆಯನ್ನು ಬಗೆಹರಿಸಿಲ್ಲ. ಸಮಸ್ಯೆ ಬಗೆಹರಿಯುವವರೆಗೂ ಈ ಜಾಗವನ್ನು ಬಿಟ್ಟು ಕದಲುವುದಿಲ್ಲ ಎಂದರು.

ರೈತರ ಹಿತರಕ್ಷಣಾ ಸಂಘದ ಕಾರ್ಯದರ್ಶಿ ಮೋಳೆ ರಾಮಕೃಷ್ಣ, ನಿರ್ದೇಶಕ ಹಳೇ ಹಂಪಾಪುರ ಮಲ್ಲರಾಜು, ಚಾಮರಾಜು ಸಿದ್ದಯ್ಯನಪುರ, ವೀರಭದ್ರಸ್ವಾಮಿ ಸರಗೂರು, ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ನಾಗರಾಜು ಸರಗೂರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.