ADVERTISEMENT

ಮೂಲ ಸೌಕರ್ಯ ಕಲ್ಪಿಸಲು ಬದ್ಧ: ಸಚಿವ ರಾಮಲಿಂಗರೆಡ್ಡಿ

ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್: ಸಚಿವ ರಾಮಲಿಂಗರೆಡ್ಡಿ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2025, 7:26 IST
Last Updated 25 ಡಿಸೆಂಬರ್ 2025, 7:26 IST
<div class="paragraphs"><p><strong>ಗುಂಡ್ಲುಪೇಟೆ ತಾಲ್ಲೂಕಿನ ಚಿಕ್ಕತುಪ್ಪೂರು ಗ್ರಾಮದ ಬಳಿ 13.5 ಎಕರೆಯಲ್ಲಿ ನಿರ್ಮಾಣವಾಗುತ್ತಿರುವ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಅನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಪರಿವೀಕ್ಷಣೆ ಮಾಡಿದರು. ಶಾಸಕ ಎಚ್.ಎಂ.ಗಣೇಶಪ್ರಸಾದ್ ಇದ್ದರು.</strong></p></div>

ಗುಂಡ್ಲುಪೇಟೆ ತಾಲ್ಲೂಕಿನ ಚಿಕ್ಕತುಪ್ಪೂರು ಗ್ರಾಮದ ಬಳಿ 13.5 ಎಕರೆಯಲ್ಲಿ ನಿರ್ಮಾಣವಾಗುತ್ತಿರುವ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಅನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಪರಿವೀಕ್ಷಣೆ ಮಾಡಿದರು. ಶಾಸಕ ಎಚ್.ಎಂ.ಗಣೇಶಪ್ರಸಾದ್ ಇದ್ದರು.

   

ಗುಂಡ್ಲುಪೇಟೆ: ಲಾರಿ ಚಾಲಕರಿಗೆ ಅನುಕೂಲ ಮಾಡುವ ಉದ್ದೇಶದಿಂದ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ಇರುವ 13.5 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಡಿ.ದೇವರಾಜ ಅರಸು ಟ್ರಕ್ ಟರ್ಮಿಲ್ ನಿರ್ಮಿಸಲಾಗಿದ್ದು, ಎಲ್ಲಾ ಮೂಲ ಸೌಲಭ್ಯ ನೀಡಲು ಉದ್ದೇಶಿಸಲಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಹೇಳಿದರು.

ತಾಲ್ಲೂಕಿನ ಚಿಕ್ಕತುಪ್ಪೂರು ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಅನ್ನು ವೀಕ್ಷಿಸಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ರಸ್ತೆಗಳಲ್ಲಿ ಟರ್ಮಿನಲ್ ಇರಬೇಕು. ಟ್ರಕ್ ಚಾಲಕರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಪಟ್ಟಣಕ್ಕೆ ಹೊಂದಿಕೊಂಡಂತೆ ಟರ್ಮಿನಲ್ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಶಾಸಕ ಎಚ್.ಎಂ.ಗಣೇಶಪ್ರಸಾದ್, ತಾಲ್ಲೂಕಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಬೇಕು ಎಂಬ ಉದ್ದೇಶದಿಂದ ವಿಶೇಷ ಕಾಳಜಿ ವಹಿಸಿ, 13.5 ಎಕರೆ ಜಾಗ ಕೊಟ್ಟಿದ್ದಾರೆ. ಇದು ಮುಖ್ಯ ರಸ್ತೆಯಲ್ಲಿದ್ದರೆ ಚೆನ್ನಾಗಿರುತಿತ್ತು. ಆದರೆ ಜಾಗದ ಕೊರತೆಯಿಂದ ಹೆದ್ದಾರಿಯಿಂದ ಅರ್ಧ ಕಿ.ಮೀ ದೂರ ಇದೆ. ಸದ್ಯ ಲಾರಿಗಳು ಈಗ ನಿಲ್ಲಿಸಿಕೊಳ್ಳಲಿ. ಯಾವುದೇ ಹಣ ಪಡೆಯುವುದಿಲ್ಲ ಎಂದು ಹೇಳಿದರು.

ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಎಂ.ಡಿ ಶಿವಪ್ರಕಾಶ್ ಮಾತನಾಡಿದರು. ಟ್ರಕ್ ಟರ್ಮಿನಲ್ ಅಧ್ಯಕ್ಷ ಸೈಯದ್ ಅಹಮದ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಮೀನಾ, ಹಾಪ್ ಕಾಮ್ಸ್ ಅಧ್ಯಕ್ಷ ನಾಗೇಶ್, ಪುರಸಭೆ ಮಾಜಿ ಅಧ್ಯಕ್ಷ ಮಧುಸೂದನ್, ಮಾಜಿ ಸದಸ್ಯ ಎನ್.ಕುಮಾರ್, ರಾಜಗೋಪಾಲ್, ಕಾಡಾ ಮಾಜಿ ಅಧ್ಯಕ್ಷ ಹಂಗಳ ನಂಜಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್, ಜಿಪಂ ಮಾಜಿ ಉಪಾಧ್ಯಕ್ಷ ಕಬ್ಬಹಳ್ಳಿ ಮಹೇಶ್, ಕರಕಲಮಾದಹಳ್ಳಿ ಪ್ರಭು, ಗೋಪಾಲಪುರ ಲೋಕೇಶ್, ಮಡಹಳ್ಳಿ ಮಣಿ, ಸಾಹುಲ್ ಹಮೀದ್, ಪ್ರಮೋದ್ ಕವ್ವ ಇದ್ದರು.

2 ಸಾವಿರ ಬಸ್ ಖರೀದಿ: ಸಚಿವ

ಗುಂಡ್ಲುಪೇಟೆ: ಪ್ರಸಕ್ತ ಸಾಲಿನಲ್ಲಿ 2 ಸಾವಿರ ಬಸ್‌ಗಳ ಖರೀದಿ ಮಾಡಲಾಗುವುದು. ಆದ್ಯತೆ ಮೇರೆಗೆ ಜಿಲ್ಲೆ-ತಾಲ್ಲೂಕುಗಳಿಗೆ ಬಸ್ ನೀಡಲಾಗುವುದು ಎಂದು ಸಾರಿಗೆ  ಸಚಿವ ರಾಮಲಿಂಗರೆಡ್ಡಿ ಹೇಳಿದರು.

ಗುಂಡ್ಲುಪೇಟೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 2019ರಿಂದ 2023ರವರೆಗೆ ನಾಲ್ಕು ವರ್ಷ ಬಸ್ ಖದೀದಿ ಮಾಡಲಿಲ್ಲ. ಅದರಿಂದ ಕೊರತೆ ಉಂಟಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ 5,800 ಬಸ್ ಖರೀದಿ ಮಾಡಿದೆವು. ಮೈಸೂರು ಸಿಟಿಗೆ 100 ಎಲೆಕ್ಟ್ರಿಕಲ್ ಬಸ್ ಹಾಗೂ ಪ್ರಸಕ್ತ ಸಾಲಿನಲ್ಲಿ 2 ಸಾವಿರ ಹೊಸ ಬಸ್ ಗಳು ಬರಲಿವೆ. ಅದರಲ್ಲಿ 900 ಕೆಎಸ್‌ಆರ್‌ಟಿಸಿ, 700 ವಾಯವ್ಯ ಕರ್ನಾಟಕ, 400 ಕಲ್ಯಾಣ ಕರ್ನಾಟಕಕ್ಕೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.