ADVERTISEMENT

ಚಾಮರಾಜನಗರ | ದೇವರಾಜು ಅರಸು ಜಯಂತಿ: ಕ್ರೀಡಾಕೂಟಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2024, 15:48 IST
Last Updated 18 ಆಗಸ್ಟ್ 2024, 15:48 IST
ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ 109ನೇ ಜನ್ಮ ದಿನಚಾರಣೆ ಅಂಗವಾಗಿ ಈಚೆಗೆ ಚಾಮರಾಜನಗರ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕುಮಾರ್ ಚಾಲನೆ ನೀಡಿದರು
ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ 109ನೇ ಜನ್ಮ ದಿನಚಾರಣೆ ಅಂಗವಾಗಿ ಈಚೆಗೆ ಚಾಮರಾಜನಗರ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕುಮಾರ್ ಚಾಲನೆ ನೀಡಿದರು   

ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ 109ನೇ ಜನ್ಮ ದಿನಚಾರಣೆ ಅಂಗವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಈಚೆಗೆ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯಿತು.

ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಆಯೋಜಿದ್ದ ಕ್ರೀಡಾಕೂಟಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕುಮಾರ್ ಚಾಲನೆ ನೀಡಿ ಮಾತನಾಡಿ, ದೇವರಾಜ ಅರಸು ಅವರ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ದೆ ಏರ್ಪಡಿಸಲಾಗಿದೆ.

100, 200 ಮೀ ಓಟ, ಉದ್ದ ಹಾಗೂ ಎತ್ತರ ಜಿಗಿತ, ಗುಂಡು ಎಸೆತ ಸ್ಪರ್ದೆಗಳನ್ನು ಆಯೋಜಿಸಲಾಗಿದ್ದು ವಿಜೇತ ಸ್ಪರ್ಧಿಗಳಿಗೆ ಜಯಂತಿಯಂದು ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.

ADVERTISEMENT

ಈ ಸಂದರ್ಭ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಲಿಂಗರಾಜು, ನಿಲಯ ಪಾಲಕ ಲಿಂಗಣ್ಣ, ಎಚ್.ಬಿ.ಸ್ವಾಮಿ, ಅಶ್ವಥ್ ಮಂಜುನಾಥ್, ಚಿನ್ನಸ್ವಾಮಿ, ಯುವ ಸ್ಪಂದನಾ ಕೇಂದ್ರದ ಗುರುರಾಜ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.