ಸಂತೇಮರಹಳ್ಳಿ: ‘ವಿಕಸಿತ ಭಾರತ ನಿರ್ಮಾಣ ಮಾಡುವುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸಾಗಿದೆ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ತಿಳಿಸಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ 11 ವರ್ಷಗಳ ಸಾಧನೆ ಕುರಿತು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಂಡಲಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
‘ಪ್ರಧಾನಿ ಅವರು 11 ವರ್ಷಗಳ ಉತ್ತಮ ಆಡಳಿತ ನಡೆಸಿ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್, ಜನ್‌ಧನ್ ಔಷಧಿ ಕೇಂದ್ರ, ಜಲಜೀವನ್ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಕುರಿತು ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಮುಂದಾಗಬೇಕು. ಜೂನ್ 21ರಂದು ಯೋಗ ದಿನಾಚರಣೆಯನ್ನು ರಾಷ್ಟ್ರವ್ಯಾಪ್ತಿಯಲ್ಲಿ ಆಚರಣೆ ಮಾಡಲಾಗುತ್ತಿದೆ. ಅಂದು ಎಲ್ಲ ಮಂಡಲ ಕೇಂದ್ರಗಳಲ್ಲಿ ಯೋಗ ಮಾಡಬೇಕಾಗಿದೆ’ ಎಂದರು.
‘ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಈಗಿನಿಂದಲೇ ಬೂತ್‌ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಬೇಕು. ಪಕ್ಷ ಸಂಘಟನೆ ಸಂಬಂಧವಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರವಾಗಿ ಪಕ್ಷದ ಸಭೆಗಳನ್ನು ಹೆಚ್ಚು ಆಯೋಜನೆ ಮಾಡುವ ಮೂಲಕ ಸಂಘಟನೆಗೆ ಹೆಚ್ಚು ಬಲ ನೀಡಲು ಅನುಕೂಲವಾಗುತ್ತದೆ’ ಎಂದು ತಿಳಿಸಿದರು.
ಮಾಜಿ ಶಾಸಕ ಎಸ್.ಬಾಲರಾಜು, ಕೊಳ್ಳೇಗಾಲ ಗ್ರಾಮಾಂತರ ಮಂಡಲ ಉಸ್ತುವಾರಿ ಎ.ಆರ್.ಬಾಬು, ಮಾಜಿ ಜಿಲ್ಲಾಧ್ಯಕ್ಷ ಆರ್.ಸುಂದರ್, ಮಂಡಲಗಳ ಅಧ್ಯಕ್ಷರಾದ ಕಾವುದವಾಡಿ ನಾಗೇಶ್, ಅನಿಲ್, ಪರಮೇಶ್, ನಿಕಟ ಪೂರ್ವ ಅಧ್ಯಕ್ಷ ಹೊನ್ನೇಗೌಡನಹುಂಡಿ ಲೋಕೇಶ್, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮಣ್ಣ ಉಪ್ಪಾರ್, ಜಿಲ್ಲಾ ಕಾರ್ಯದರ್ಶಿ ಮಹೇಶ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಲೋಕೇಶ್, ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್, ರಾಜುನಾಯ್ಕ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ರವೀಶ್, ಪುನೀತ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.