ADVERTISEMENT

ಮಹದೇಶ್ವರಬೆಟ್ಟ: ವಸತಿ ಗೃಹಗಳಲ್ಲಿ 22 ರಿಂದ 24ರವರೆಗೆ ಭಕ್ತರಿಗೆ ಅವಕಾಶವಿಲ್ಲ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2025, 15:40 IST
Last Updated 20 ಏಪ್ರಿಲ್ 2025, 15:40 IST
<div class="paragraphs"><p> ಮಲೆಮಹದೇಶ್ವರಸ್ವಾಮಿ ದೇವಾಲಯ</p></div>

ಮಲೆಮಹದೇಶ್ವರಸ್ವಾಮಿ ದೇವಾಲಯ

   

ಮಹದೇಶ್ವರ ಬೆಟ್ಟ; ಮಹದೇಶ್ವರ ಬೆಟ್ಟದಲ್ಲಿ ಏ.22ರಿಂದ 24ರ ವರೆಗೆ ಮೂರು ದಿನಗಳ ಕಾಲ ಭಕ್ತರ ವಾಸ್ತವ್ಯಕ್ಕೆ ಪ್ರಾಧಿಕಾರದ ಕೊಠಡಿಗಳು ಲಭ್ಯವಿರುವುದಿಲ್ಲ ಎಂದು ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ. ಈ. ರಘು ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆ ಏಪ್ರಿಲ್ 24ರ ಗುರುವಾರ ನಡೆಯಲಿದ್ದು, ಬೆಟ್ಟಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಆಗಮಿಸುತ್ತಾರೆ. ಆದ್ದರಿಂದ ಭಕ್ತರಿಗೆ ವಸತಿ ವ್ಯವಸ್ಥೆ ಇರುವುದಿಲ್ಲ. ಪ್ರಾಧಿಕಾರದ ಜೊತೆ ಭಕ್ತರು ಸಹಕರಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.