
ಹನೂರು: ಹಲವಾರು ವರ್ಷಗಳಿಂದ ಬಗೆಹರಿಯದ ಸಮಸ್ಯೆಗಳನ್ನು ಬಗೆಹರಿಸಿ ಜನರಿಗೆ ಹಾಗೂ ಫಲಾನುಭವಿಗಳಿಗೆ ಡಿಜಿಟಲ್ ದಾಖಲೆ ನೀಡಲಾಗುತ್ತಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
ತಾಲ್ಲೂಕಿನ ಲೊಕ್ಕನಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕಂದಾಯ ಇಲಾಖೆ ವತಿಯಿಂದ ಆಯೋಜಿಸಿದ್ದ ಕಂದಾಯ–ಪಿಂಚಣಿ ಅದಾಲತ್ ಹಾಗೂ ಕಂದಾಯ ಇಲಾಖೆಯ ವಿವಿಧ ಯೋಜನೆಯ ದಾಖಲೆಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಆಧಾರವಾಗುವಂತೆ ಮನೆ, ಜಮೀನು ಹಕ್ಕು ಪತ್ರ ಸೇರಿದಂತೆ ಯೋಜನೆಯ ಆದೇಶಗಳನ್ನು ವಿತರಣೆ ಮಾಡಲಾಗುತ್ತಿದೆ. ಜಮೀನು ಪೋಡಿಗೆ ರೈತರು ಅಲೆದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಸಂಬಂಧ ಕಂದಾಯ ಇಲಾಖೆ ದಿಟ್ಟ ನಿರ್ಧಾರ ಕೈಗೊಂಡು ಅರ್ಹರಿಗೆ ಹಕ್ಕು ದಕ್ಕಿಸುವ ಕೆಲಸ ಮಾಡಲಾಗುತ್ತಿದೆ. ಈ ಕಾರ್ಯವನ್ನು ಕಂದಾಯ ಇಲಾಖೆ ಮನೆ ಬಾಗಿಲಿಗೆ ಯೋಜನೆಯನ್ನು ಒದಗಿಸುವ ಕಾರ್ಯ ಮಾಡುತ್ತಿರುವುದು ಸ್ವಾಗತರ್ಹ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಚೈತ್ರಾ, ಕೊಳ್ಳೇಗಾಲ ಉಪತಹಶೀಲ್ದಾರ್ ರವಿ, ಸರ್ವೆ ಅಧೀಕ್ಷಕ ಕುಮಾರಸ್ವಾಮಿ, ಲೊಕ್ಕನಹಳ್ಳಿ ರಾಜಸ್ವ ನಿರೀಕ್ಷಕ ಮಹಾದೇವಸ್ವಾಮಿ, ಕಂದಯ ಆಡಳಿತ ಅಧಿಕಾರಿಗಳಾದ ಮಾರುತಿ, ವಿದ್ಯಾಶ್ರೀ, ಶಿವಕುಮಾರ್, ನಂಜುಂಡ, ವಿಷಯ ನಿರ್ವಾಹಕಿ ಮಹೇಶ್ವರಿ ಸಿಬ್ಬಂದಿ ನಿಂಗರಾಜು, ಕೃಷ್ಣ ಮೂರ್ತಿ, ಸಿದ್ದರಾಜು, ಶಿವಚಂದ್ರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.