ADVERTISEMENT

ಅಂಗವಿಕಲರ ಶ್ರೇಯೋಭಿವೃದ್ಧಿಗೆ ಶೇ 5 ಅನುದಾನ ಮೀಸಲು

ಅಂಗವಿಕಲರಿಗೆ ಸಾಧನ-ಸಲಕರಣೆಗಳನ್ನು ವಿತರಣೆ ಮಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2025, 4:55 IST
Last Updated 5 ಅಕ್ಟೋಬರ್ 2025, 4:55 IST
ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಅಂಗವಿಕಲರಿಗೆ ತ್ರಿಚಕ್ರ ವಾಹನ, ಹೊಲಿಗೆಯಂತ್ರ, ಬ್ಯಾಟರಿ ಚಾಲಿತ ವೀಲ್ ಚೇರ್, ಕೈಗಡಿಯಾರ ಸಹಿತ ಇನ್ನಿತರ ಸಾಧನ ಸಲಕರಣೆಗಳನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ವಿತರಣೆ ಮಾಡಿದರು
ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಅಂಗವಿಕಲರಿಗೆ ತ್ರಿಚಕ್ರ ವಾಹನ, ಹೊಲಿಗೆಯಂತ್ರ, ಬ್ಯಾಟರಿ ಚಾಲಿತ ವೀಲ್ ಚೇರ್, ಕೈಗಡಿಯಾರ ಸಹಿತ ಇನ್ನಿತರ ಸಾಧನ ಸಲಕರಣೆಗಳನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ವಿತರಣೆ ಮಾಡಿದರು   

ಚಾಮರಾಜನಗರ: ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಚಾಮರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂಗವಿಕಲರಿಗೆ ₹ 3,86,310 ವೆಚ್ಚದ ತ್ರಿಚಕ್ರ ವಾಹನ, ಹೊಲಿಗೆಯಂತ್ರ, ಬ್ಯಾಟರಿ ಚಾಲಿತ ವೀಲ್ ಚೇರ್, ಕೈಗಡಿಯಾರ ಸಹಿತ ಇನ್ನಿತರ ಸಾಧನ ಸಲಕರಣೆಗಳನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ವಿತರಣೆ ಮಾಡಿದರು.

ಇದೇ ವೇಳೆ ಮಾತನಾಡಿದ ಶಾಸಕರು ಅಂಗವಿಕಲರ ಕಲ್ಯಾಣ ಇಲಾಖೆ ವತಿಯಿಂದ ₹ 3 ಲಕ್ಷಕ್ಕೂ  ಹೆಚ್ಚಿನ ಮೊತ್ತದ ಸಾಧನ ಸಲಕರಣೆಗಳನ್ನು ಅರ್ಹರಿಗೆ ವಿತರಿಸಲಾಗಿದೆ. ಸರ್ಕಾರದ ವಿವಿಧ ಇಲಾಖೆಗಳು, ಸಚಿವರು, ಶಾಸಕರು, ಸಂಸದರು, ಸ್ವಯಂ ಸೇವಾ ಸಂಸ್ಥೆಗಳಿಗೆ ಸರ್ಕಾರ ನೀಡುವ ಅನುದಾನದಲ್ಲಿ ಅಂಗವಿಕಲರಿಗೆ ಶೇ 5ರಷ್ಟು ವ್ಯಯಮಾಡಬೇಕು ಎಂಬ ನಿಯಮವಿದ್ದು ಅದರ ಲಾಭವನ್ನು ಅಂಗವಿಕಲರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಸಾಧನ, ಸಲಕರಣೆಗಳನ್ನು ಪಡೆದಿರುವ ಅಂಗವಿಕಲರು ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು. ಸಮಾಜ ಕೂಡ ಅಂಗವಿಕಲರಿಗೆ ಅನುಕಂಪ ತೋರುವ ಬದಲು ಅವಕಾಶಗಳನ್ನು ನೀಡಬೇಕು. ಅಂಗವಿಕಲರ ಶ್ರೇಯೋಭಿವೃದ್ಧಿಗಾಗಿ ನಿಗದಿಯಾಗಿರುವ ಅನುದಾನ ಸಮರ್ಪಕವಾಗಿ ಬಳಕೆಯಾದರೆ ಅವರ ಬದುಕು ಹಸನಾಗಲಿದೆ, ಸಮಾಜದಲ್ಲಿ ಇತರರಂತೆ ನೆಮ್ಮದಿಯ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದರು.

ADVERTISEMENT

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಯ್ಯದ್ ರಫಿ, ಮಾದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರೂಪೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.