ಅಮಾನತು
ಚಾಮರಾಜನಗರ: ಹಾಸ್ಟೆಲ್‌ಗಳಲ್ಲಿ ಅವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ ಆಹಾರ ಪದಾರ್ಥಗಳ ದುರ್ಬಳಕೆ, ಬಿಲ್ ಹಾಗೂ ಕಡತಗಳ ನಿರ್ವಹಣೆ ಮಾಡದ ಆರೋಪದ ಮೇಲೆ ನಾಲ್ವರು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ. ನ್ಯಾಯಬೆಲೆ ಅಂಗಡಿ ವಿತರಕನ ಪರವಾನಗಿ ಅಮಾನತುಗೊಳಿಸಲಾಗಿದೆ.
ಬಂಡಿಗೆರೆ ಅಂಗನವಾಡಿ ಕಾರ್ಯಕರ್ತೆಯನ್ನು ಅಮಾನತುಗೊಳಿಸಲಾಗಿದೆ. ಸರ್ಕಾರಿ ಶಾಲೆಯ ಶಿಕ್ಷಕಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಾರ್ಡನ್‌ಗಳನ್ನು ಒಂದು ತಿಂಗಳು ಕಡ್ಡಾಯ ರಜೆ ಮೇಲೆ ಕಳಿಸಿ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಸರ್ಕಾರಿ ಹಾಸ್ಟೆಲ್‌ಗಳು, ಶಾಲೆಗಳು, ಅಂಗನವಾಡಿ, ಆಹಾರ ದಾಸ್ತಾನು ಗೋದಾಮುಗಳು, ಸರ್ಕಾರಿ ಆಸ್ಪತ್ರೆಗಳಿಗೆ ಮಂಗಳವಾರ ದಿಢೀರ್ ಭೇಟಿ ನೀಡಿದ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಅವರ ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.