ADVERTISEMENT

ಯಳಂದೂರು | ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಿ

ಆಸ್ಪತ್ರೆ, ಅಂಗನವಾಡಿ, ಕೆಪಿಎಸ್ ಶಾಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 8:33 IST
Last Updated 27 ಫೆಬ್ರುವರಿ 2026, 8:33 IST
ಯಳಂದೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸಮೀಪ ನಡೆಯುತ್ತಿರುವ ನೂರು ಹಾಸಿಗೆಗಳ ಕಟ್ಟಡ ಕಾಮಗಾರಿಯನ್ನು ಗುರುವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್,ವಿನೋತ್ ಪ್ರಿಯ ವೀಕ್ಷಿಸಿದರು.
ಯಳಂದೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸಮೀಪ ನಡೆಯುತ್ತಿರುವ ನೂರು ಹಾಸಿಗೆಗಳ ಕಟ್ಟಡ ಕಾಮಗಾರಿಯನ್ನು ಗುರುವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್,ವಿನೋತ್ ಪ್ರಿಯ ವೀಕ್ಷಿಸಿದರು.   

ಯಳಂದೂರು: ಪಟ್ಟಣದ ಸಾರ್ವಜನಿಕ ಆಸ್ಪತ್ರೆ, ಅಂಗನವಾಡಿ ಕೇಂದ್ರ ಹಾಗೂ ಕೆಪಿಎಸ್ ಶಾಲೆಗಳಿಗೆ ಗುರುವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್.ವಿನೋತ್ ಪ್ರಿಯ ಭೇಟಿ ನೀಡಿ ಮಾಹಿತಿ ಪಡೆದರು.

ಅವರು ಮಾತನಾಡಿ, ‘ಅಂಗನವಾಡಿಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕು. ಶುದ್ಧ ನೀರು ಮತ್ತು ಸ್ವಚ್ಛತೆಗೆ ಆದ್ಯತೆ ನೀಡಬೇಕು’ ಎಂದರು.

ಪಟ್ಟಣದ ನಿರ್ಮಾಣ ಹಂತದ 100 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆ ಕಟ್ಟಡದ ಗುಣಮಟ್ಟ ಉತ್ತಮವಾಗಿ ಇರಬೇಕು.  ಅಧಿಕಾರಿಗಳು  ಆಗಾಗ  ಅಭಿವೃದ್ಧಿ ಕಾಮಗಾರಿ ವೀಕ್ಷಿಸಲಿ ಎಂದರು. ಕೆಪಿಎಸ್ ಶಾಲೆಯ ಕಲಿಕಾ ಗುಣಮಟ್ಟ ಮತ್ತಷ್ಟು ಹೆಚ್ಚಾಗಬೇಕು. ಎಸ್ಎಸ್ಎಲ್ಸಿ ಫಲಿತಾಂಶಕ್ಕೆ ಒತ್ತು ನೀಡಬೇಕು ಎಂದರು. ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶ್ರೀಧರ್, ತಾಲ್ಲೂಕು ವೈದ್ಯಾಧಿಕಾರಿ ಡಾ. ತನುಜಾ, ಅಧಿಕಾರಿಗಳಾದ ಜಯಶೀಲ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.