ADVERTISEMENT

ಗುಂಡ್ಲುಪೇಟೆ | ಹುಚ್ಚು ನಾಯಿ ಕಡಿತ: ವ್ಯಕ್ತಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 2:31 IST
Last Updated 22 ಆಗಸ್ಟ್ 2025, 2:31 IST
ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ಹುಚ್ಚುನಾಯಿ ದಾಳಿಯಿಂದ ಗಾಯಗೊಂಡ ವ್ಯಕ್ತಿ ಮೈಸೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ಹುಚ್ಚುನಾಯಿ ದಾಳಿಯಿಂದ ಗಾಯಗೊಂಡ ವ್ಯಕ್ತಿ ಮೈಸೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.   

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಮೈಸೂರು ರಸ್ತೆಯಲ್ಲಿರುವ ಕಾರ್ ಗ್ಯಾರೇಜ್‌ವೊಂದರ ಬಳಿ ಹುಚ್ಚನಾಯಿ ಕಡಿತದಿಂದ ಕಾರ್ಮಿಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-766ರಲ್ಲಿರುವ ತಾಜ್ ಕಾರ್ ಗ್ಯಾರೇಜ್‌ನಲ್ಲಿ ಕೆಲಸ ಮಾಡುವ ಅಬ್ದುಲ್ ಖಾಲಿಕ್ ನಾಯಿ ಕಡಿತಕ್ಕೆ ಒಳಗಾದವರು. ಎಂದಿನಂತೆ ಗ್ಯಾರೇಜ್ ಕೆಲಸ ಮುಗಿಸಿ ಮನೆಗೆ ಹೊರಡುವಾಗ ಏಕಾಏಕಿ ಹುಚ್ಚು ನಾಯಿ ದಾಳಿ ಮಾಡಿದೆ. ಕೂಡಲೇ ಅವರನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು. ವೈದ್ಯರ ಸಲಹೆಯಂತೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪಟ್ಟಣ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು ಮಕ್ಕಳು ಹಾಗೂ ವೃದ್ದರು ಒಂಟಿಯಾಗಿ ತಿರುಗಾಡಲು ಭಯಪಡುವಂತಾಗಿದೆ. ಪುರಸಭೆ ಬೀದಿನಾಯಿಗಳಿಗೆ ಕಡಿವಾಣ ಹಾಕಬೇಕು ಎಂದು ಕರ್ನಾಟಕ ಕಾವಲು ಪಡೆಯ ತಾಲೂಕು ಅಧ್ಯಕ್ಷ ಎ.ಅಬ್ದುಲ್ ಮಾಲಿಕ್ ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.