ಯಳಂದೂರು: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಶನಿವಾರ ಜಿಲ್ಲಾ ಬಿಜೆಪಿ ಘಟಕದ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯದಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರ ನೋಟಿಸ್ ನೀಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಆಸ್ಪತ್ರೆ ಮುಂಭಾಗ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ತಾಲ್ಲೂಕು ಮಂಡಲದ ಅಧ್ಯಕ್ಷ ಅನಿಲ್ ಮಾತನಾಡಿ, ‘ರಾಜ್ಯ ಸರ್ಕಾರ ಜನೌಷಧಿ ಕೇಂದ್ರ ಮುಚ್ಚುವ ಮೂಲಕ ಬಡ ಜನರ ಜೀವದ ಜೊತೆ ಚೆಲ್ಲಾಟ ಆಡುತ್ತಿದೆ. ಪ್ರಧಾನ ಮಂತ್ರಿ ಫೋಟೊ ಇರುವ ಕಾರಣಕ್ಕೆ ಸಿಎಂ ಮತ್ತು ಆರೋಗ್ಯ ಸಚಿವರು ಈ ರೀತಿ ಮಾಡುತ್ತಿದ್ದಾರೆ. ಸರ್ಕಾರ ಹೊರಡಿಸಿರುವ ಆದೇಶ ಹಿಂಪಡೆದು ಕಡಿಮೆ ಬೆಲೆಯಲ್ಲಿ ಸಿಗುವ ಔಷಧಗಳನ್ನು ಎಲ್ಲರಿಗೂ ಸಿಗುವಂತೆ ಮಾಡಬೇಕು’ ಎಂದು ಆಗ್ರಹಿಸಿದರು.
ಜಿಲ್ಲಾ ಕಾರ್ಯದರ್ಶಿ ಮಹೇಶ್, ಮುಖಂಡರಾದ ಮಾಂಬಳ್ಳಿ ರಾಮು, ಸೂರ್ಯನಾರಾಯಣ, ಭೀಮಪ್ಪ, ಮಹೇಶ್, ಕಿಟ್ಟಿ, ಸಿದ್ದರಾಜು, ರುದ್ರ, ಶಿವು ಚಂದು, ಮಹೇಶ, ದೊರೆಸ್ವಾಮಿ, ಮಹೇಶ್, ಸನತ್, ದುಂಡು ಮಾದಶೆಟ್ಟಿ ಹಾಗೂ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.