ADVERTISEMENT

ಕುಡಿದ ಮತ್ತಿನಲ್ಲಿ ಪೊಲೀಸರ ಮೇಲೆ ಹಲ್ಲೆ: ಬಿಎಂಟಿಸಿ ಚಾಲಕ ಬಂಧನ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2024, 16:46 IST
Last Updated 4 ಆಗಸ್ಟ್ 2024, 16:46 IST

ಯಳಂದೂರು: ತಾಲ್ಲೂಕಿನ ಕಂದಹಳ್ಳಿ ಮಾದಪ್ಪನ ಜಾತ್ರೆಯ ನಿಮಿತ್ತ ಭಾನುವಾರ ಬಸ್ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರ ಮೇಲೆ ಮದ್ಯಪಾನ ಮಾಡಿದ್ದ ವ್ಯಕ್ತಿಯೊಬ್ಬರು ಹಲ್ಲೆ ಮಾಡಿದ್ದಾರೆ.

ಜನ್ನೂರು ಹೊಸೂರು ಗ್ರಾಮದ ಬಿಎಂಟಿಸಿ ಚಾಲಕ ಮಹೇಶ್ ಕುಮಾರ್ ಹಲ್ಲೆ ಮಾಡಿ ಬಂಧಿತ ವ್ಯಕ್ತಿ.

ಕುಡಿದು ಸಾರ್ವಜನಿಕರೊಂದಿಗೆ ರಂಪಾಟ ಮಾಡುತ್ತಿದ್ದ ಮಹೇಶ್‌ಗೆ ಪೊಲೀಸರು ಬುದ್ಧಿವಾದ ಹೇಳಿ ಮನೆಗೆ ಹೋಗುವಂತೆ ತಿಳಿಸಿದ್ದರು. ಇದರಿಂದ ಕೆರಳಿದ ಮಹೇಶ್ ಪೊಲೀಸರ ಕೊರಳುಪಟ್ಟಿ ಹಿಡಿದು ಚಪ್ಪಲಿಯಿಂದ ಹಲ್ಲೆಗೆ ಮುಂದಾದರು. ಆಗ ಸಾರ್ವಜನಿಕರು ಮತ್ತು ಪೊಲೀಸರ ರಕ್ಷಣೆಗೆ ಬಂದ ಕಾನ್‌ಸ್ಟೆಬಲ್ ಒಬ್ಬರು ಗಾಯಗೊಂಡರು. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ADVERTISEMENT

ಮಹೇಶ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.