ADVERTISEMENT

ಚಿಕ್ಕಬಳ್ಳಾಪುರ: ‘ಇ–ಆಸ್ಪತ್ರೆ’ ಅನುಷ್ಠಾನ

ಜಿಲ್ಲೆಯಲ್ಲಿ ಇಂದು ಆರಂಭ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 5:27 IST
Last Updated 8 ಮಾರ್ಚ್ 2021, 5:27 IST
ಆರ್. ಲತಾ
ಆರ್. ಲತಾ   

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಪ್ರಥಮ ಬಾರಿಗೆ ಕಾಗದ ರಹಿತ ‘ಇ–ಆಸ್ಪತ್ರೆ’ ಕಾರ್ಯಕ್ರಮವನ್ನು ಮಾ. 8ರಂದು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದ್ದಾರೆ.

ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಪ್ರಾಯೋಗಿಕವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇ-ಆಸ್ಪತ್ರೆ ಜಾರಿಯಾಗುತ್ತಿದೆ. ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ನಗರ ಆರೋಗ್ಯ ಕೇಂದ್ರಗಳಲ್ಲಿ ಸಂಪೂರ್ಣವಾಗಿ ಕಾಗದರಹಿತವಾಗಿ ನಿರ್ವಹಿಸಲು ಇ–ಆಸ್ಪತ್ರೆ ಯೋಜನೆ ರೂಪಿಸಲಾಗಿದೆ ಎಂದಿದ್ದಾರೆ.

ಹೊರರೋಗಿ ವಿಭಾಗದಲ್ಲಿ ನೋಂದಣಿಯಿಂದ ಹಿಡಿದು ಎಲ್ಲ ಸೇವೆಗಳನ್ನು ಸಂಪೂರ್ಣವಾಗಿ ಗಣಕೀಕರಣಗೊಳಿಸಲಾಗುವುದು. ಪ್ರತಿ ರೋಗಿಗೆ ಪ್ರತ್ಯೇಕ ನೋಂದಣಿ ಸಂಖ್ಯೆ ನೀಡಲಾಗುವುದು. ಪ್ರತಿ ಬಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ವೇಳೆ ನೋಂದಣಿ ಸಂಖ್ಯೆಯನ್ನು ಬಾರ್ ಕೋಡ್‌ನಲ್ಲಿ ಸ್ಕ್ಯಾನ್ ಮಾಡಲಾಗುವುದು. ರೋಗಿಗೆ ನೀಡಲಾಗುವ ಚಿಕಿತ್ಸೆ ಮತ್ತು ಸಲಹೆ, ಸೂಚನೆಗಳನ್ನು ಆನ್‌ಲೈನ್‌ನಲ್ಲಿ ನಮೂದಿಸಿ ಸಂಗ್ರಹಿಸಲಾಗುವುದು. ಸಾರ್ವಜನಿಕರು ಆಸ್ಪತ್ರೆಯ ಸಿಬ್ಬಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.