ADVERTISEMENT

ಚಾಮರಾಜನಗರ: ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2019, 6:36 IST
Last Updated 19 ನವೆಂಬರ್ 2019, 6:36 IST
   

ಚಾಮರಾಜನಗರ: ಬೇಸಿಗೆ ರಜೆಯಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ಸಂಭ್ರಮ ಎಂಬ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ಹನೂರು ತಾಲ್ಲೂಕಿನ ಗೋಪಿನಾಥಂನಲ್ಲಿ ಸೋಮವಾರ ರಾತ್ರಿ ವಾಸ್ತವ್ಯ ಹೂಡಿದ ನಂತರ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

'ಶೈಕ್ಷಣಿಕ ವರ್ಷ ಮುಗಿದ ನಂತರ ಬೇಸಿಗೆಯಲ್ಲಿ ಶಾಲೆಗಳಿಗೆ ಒಂದೂ ಮುಕ್ಕಾಲು ತಿಂಗಳು ರಜೆ ಇರುತ್ತದೆ. ಮಕ್ಕಳು ಮನೆಯಲ್ಲೇ ಇರಬೇಕಾಗುತ್ತದೆ. ಹೀಗಾಗಿ, ಆ ಸಮಯದಲ್ಲೂ ಶಾಲೆಯನ್ನು ತೆರೆದು ನಗರ ಪ್ರದೇಶಗಳಲ್ಲಿ ನಡೆಯುವ ಬೇಸಿಗೆ ಶಿಬಿರದ (ಸಮ್ಮರ್ ಕ್ಯಾಂಪ್) ಮಾದರಿಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನೂ ಪೂರೈಸಲಾಗುವುದು' ಎಂದು ಹೇಳಿದರು.

ADVERTISEMENT

'ಮಕ್ಕಳ ಪ್ರತಿಭೆಯನ್ನು ಹೊರ ತರಲು ಇದು ವೇದಿಕೆಯಾಗಲಿದೆ. ಮುಂದಿನ ಬೇಸಿಗೆ ರಜೆಯಿಂದಲೇ ಬೇಸಿಗೆ ಸಂಭ್ರಮ ಅನುಷ್ಠಾನಗೊಳಿಸಲು ಇಲಾಖೆ ನಿರ್ಧರಿಸಿದೆ' ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.