ADVERTISEMENT

ಚಾಮರಾಜನಗರ: 8 ಮಂದಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2021, 2:57 IST
Last Updated 9 ಸೆಪ್ಟೆಂಬರ್ 2021, 2:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ ಎಂಟು ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಅಷ್ಟೇ ಜನ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸಕ್ರಿಯ ಪ್ರಕರಣಗಳು 59 ಇವೆ. ಸೋಂಕಿತರಲ್ಲಿ ಇಬ್ಬರು ಐಸಿಯುನಲ್ಲಿದ್ದಾರೆ. 18 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 32,379 ಮಂದಿಗೆ ಕೊರೊನಾ ವೈರಸ್‌ ತಗುಲಿದೆ. 31,783 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ಬುಧವಾರ 2,288 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 2,280 ಮಂದಿಯ ವರದಿ ನೆಗೆಟಿವ್‌ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.