ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ ಎಂಟು ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಎಂಟು ಮಂದಿ ಗುಣಮುಖರಾಗಿದ್ದಾರೆ.
70 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 44 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಇಬ್ಬರು ಐಸಿಯುನಲ್ಲಿದ್ದಾರೆ.
ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 6,802ಕ್ಕೆ ಏರಿದೆ. ಗುಣಮುಖರಾದವರ ಸಂಖ್ಯೆ 6,601ಕ್ಕೆ ಹಿಗ್ಗಿದೆ. ಸಾವಿನ ಸಂಖ್ಯೆಯಲ್ಲಿ ವ್ಯತ್ಯಾಸವಾಗಿಲ್ಲ.
ಮಂಗಳವಾರ 1,715 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, ಈ ಪೈಕಿ 1,707 ವರದಿಗಳು ನೆಗೆಟಿವ್ ಬಂದಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.