ADVERTISEMENT

ಚಾಮರಾಜನಗರ: 18 ಹೊಸ ಪ್ರಕರಣ, 29 ಮಂದಿ ಚೇತರಿಕೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 16:15 IST
Last Updated 7 ಆಗಸ್ಟ್ 2021, 16:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 18 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 29 ಮಂದಿ ಸೋಂಕುಮುಕ್ತರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸಕ್ರಿಯ ಪ್ರಕರಣಗಳ ಸಂಖ್ಯೆ 238ಕ್ಕೆ ಇಳಿದಿದೆ. ಏಳು ಮಂದಿ ಐಸಿಯುನಲ್ಲಿದ್ದು, 23 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಉಳಿದವರು ಕೋವಿಡ್‌ ಆಸ್ಪತ್ರೆ ಹಾಗೂ ಕೇರ್‌ ಕೇಂದ್ರಗಳಲ್ಲಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 32,053 ಪ್ರಕರಣಗಳು ವರದಿಯಾಗಿವೆ. 31,285 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ADVERTISEMENT

ಶನಿವಾರ 1,339 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,321 ವರದಿಗಳು ನೆಗೆಟಿವ್‌ ಬಂದಿವೆ. 18 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ.

18 ಮಂದಿ ಸೋಂಕಿತರಲ್ಲಿ ಚಾಮರಾಜನಗರ ತಾಲ್ಲೂಕಿನ ಏಳು, ಹನೂರಿನ ಒಂಬತ್ತು ಮಂದಿ, ಗುಂಡ್ಲುಪೇಟೆ ತಾಲ್ಲೂಕು ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರು ಇದ್ದಾರೆ.

ಗುಣಮುಖರಾದ 29 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನ ಎಂಟು, ಗುಂಡ್ಲುಪೇಟೆಯ ಮೂವರು, ಹನೂರಿನ 18 ಮಂದಿ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.